ಬೆಂಗಳೂರು : ರಾಜ್ಯದ 6 ಇಂಜಿನಿಯರಿಂಗ್ ಕಾಲೇಜುಗಳನ್ನು ಐಐಟಿ ಮಟ್ಟಕ್ಕೆ ಉನ್ನತೀಕರಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಿಎಂಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಸರ್ಕಾರ ನಡೆಸಲು ಅವಕಾಶ ಕೊಟ್ಟ ವರಿಷ್ಠರಿಗೆ ಧನ್ಯವಾದ ಹೇಳಿದರು. ಕೋವಿಡ್ ಹಿನ್ನೆಲೆಯಲ್ಲಿ ಸ್ವಲ್ಪ ನಿಯಂತ್ರಣಕ್ಕೆ ಬಂದ ಮೇಲೆ ನಾನು ಅಧಿಕಾರ ವಹಿಸಿಕೊಂಡೆ. ಯಡಿಯೂರಪ್ಪ ಸಮರ್ಥವಾಗಿ ಕೋವಿಡ್ ನಿರ್ವಹಿಸಿದ್ದರು ಎಂದರು.
8.5 ಲಕ್ಷ ಕಳೆದ ವರ್ಷ ರೈತ ವಿದ್ಯಾರ್ಥಿಗಳು ವಿದ್ಯಾನಿಧಿ ಪಡೆದುಕೊಂಡಿದ್ದರು. 9.98 ವಿದ್ಯಾರ್ಥಿಗಳಿಗೆ ರೈತ ವಿದ್ಯಾನಿಧಿ ತಲುಪಿದೆ. ರೈತ ಮಕ್ಕಳಿಗೆ ಇದರಿಂದ ಭರವಸೆ ಮೂಡಿದೆ. ಸಂಧ್ಯಾ ಸುರಕ್ಷಾ ಮಾಸಾಶನ ಎಲ್ಲ ಹೆಚ್ಚು ಮಾಡಿ ಆರ್ಥಿಕ ಆಸರೆ ನೀಡಲಾಗಿದೆ. ಬಡವರಿಗೆ ವಯಸ್ಸಾದವರಿಗೆ ಅಂಗವಿಕಲರಿಗೆ ಕೊಟ್ಟಿದ್ದೇವೆ. ಇತ್ತೀಚೆಗೆ ಎಸ್ಸಿ.ಎಸ್ಟಿ ಸಮುದಾಯಕ್ಕೆ ಯೋಜನಗೆಳನ್ನು ಹೆಚ್ಚಳ ಮಾಡಿದ್ದೇವೆ. 25 ಲಕ್ಷಕ್ಕೂ ಹೆಚ್ಚಿನ ಕುಟುಂಬಗಳಿಗೆ ಪುಕ್ಕಟೆ ವಿದ್ಯುತ್ ನೀಡುವ ಕೆಲಸ ಮಾಡಿದ್ದೇವೆ ಎಂದು ಹೇಳಿದ್ದಾರೆ.
"ರಾಜ್ಯದ 6 ಇಂಜಿನಿಯರಿಂಗ್ ಕಾಲೇಜುಗಳನ್ನು ಐಐಟಿ ಮಟ್ಟಕ್ಕೆ ಉನ್ನತೀಕರಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ" : ಮುಖ್ಯಮಂತ್ರಿ @BSBommai
— CM of Karnataka (@CMofKarnataka) July 28, 2022