ಹುಬ್ಬಳ್ಳಿ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದವರನ್ನು ಎನ್ಕೌಂಟರ್ ಮಾಡಬೇಕು ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ರಾಜೀನಾಮೆ ಕೊಡಬೇಕು. ನೀವು ಅಧಿಕಾರದಲ್ಲಿರಲು ನಾಲಾಯಕ್ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
BIGG BREAKING NEWS : ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ : ಇಬ್ಬರು ಆರೋಪಿಗಳ ಅರೆಸ್ಟ್ : ದ.ಕ ಎಸ್ಪಿ ಸ್ಪಷ್ಟನೆ
ಮೃತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಕೊಡಬೇಕು. ಮೃತ ಪ್ರವೀಣ್ ಕನಸು ನನಸು ಮಾಡಬೇಕು ನೆರವು ನೀಡಿ ಮನೆ ಕಟ್ಟಿಸಿಕೊಡಬೇಕು. ಪಿಎಫ್ ಐ, ಎಸ್ ಡಿಪಿಐ ಮೊದಲು ನಿಷೇಧ ಮಾಡಬೇಕು. ಆಗಸ್ಟ್ 5 ರಂದು ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. ತಾಲೂಕು, ಜಿಲ್ಲಾ, ರಾಜ್ಯ ಮಟ್ಟದಲ್ಲಿ ಹಿಂದೂಪರ ಸಂಘಟನೆಗಳು ಹೋರಾಟ ಮಾಡಿ ಪಿಎಫ್ ಐ, ಎಸ್ ಡಿಪಿಐ ನಿಷೇಧ ಮಾಡುವಂತೆ ಒತ್ತಾಯಿಸುತ್ತೇವೆ ಎಂದು ಹೇಳಿದ್ದಾರೆ.
ಮಳೆ ನೀರಿನಿಂದ ಜಲಾವೃತವಾದ ಶಾಲೆ: ವಿದ್ಯಾರ್ಥಿಗಳು ನಿರ್ಮಿಸಿದ ʻಕುರ್ಚಿಗಳ ಸೇತುವೆʼ ಮೇಲೆ ಹಾದುಹೋದ ಶಿಕ್ಷಕಿ ಅಮಾನತು!