ಪುತ್ತೂರು : ಕೊಲೆಯಾದ ಬಿಜೆಪಿ ಯುವ ಮುಖಂಡ ಪ್ರವೀನ್ ನೆಟ್ಟಾರು ಮನೆಗೆ ಸಿಎಂ ಬೊಮ್ಮಾಯಿ ಭೇಟಿ ನೀಡಿದ್ದು, ಕುಟುಂಬಸ್ಥರಿ ಸಾಂತ್ವನ ಹೇಳಿದ್ದಾರೆ. ಇನ್ನು ಇದೇ ವೇಳೆ ಕುಟುಂಬಸ್ಥರಿಗೆ 25 ಲಕ್ಷ ರೂಪಾಯಿ ಚೆಕ್ ಹಸ್ತಾಂತರಿಸಿದ್ದಾರೆ.
ನೆಟ್ಟೂರು ಗ್ರಾಮದಲ್ಲಿ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ ನಂತ್ರ ಮಾಧ್ಯಮಗಳೊಂದಿಗೆ ಮಾತನಾಡಿ ಸಿಎಂ ಬೊಮ್ಮಾಯಿ, “ಪ್ರವೀಣ್ ಕುಟುಂಬಸ್ಥರಿಗೆ ಸಿಎಂ ಪರಿಹಾರ ನಿಧಿಯಿಂದ 25 ಲಕ್ಷ ರೂಪಾಯಿ ಚೆಕ್ ಹಸ್ತಾಂತರಿಸಿದ್ದೇನೆ. ಇದು ಕೊಲೆ ಮಾತ್ರವಲ್ಲ, ದೇಶದ್ರೋಹದ ಕೆಲಸ. ಪ್ರಕರಣದ ಬಗ್ಗೆ ಎಲ್ಲಾ ಆಯಾಮಗಳಲ್ಲೂ ತನಿಖೆಯಾಗ್ತಿದೆ. ಅತಿ ಶೀಘ್ರದಲ್ಲೇ ಎಲ್ಲಾ ಆರೋಪಿಗಳನ್ನು ಬಂಧಿಸಲಾಗುವುದು. ಇನ್ನು ಇದನ್ನು ಕೇವಲ ಒಂದು ಕೊಲೆ ಪ್ರಕರಣವಾಗಿ ನೋಡುವುದಿಲ್ಲ, ಅಗತ್ಯ ಬಿದ್ದರೆ ಪ್ರವೀಣ್ ಕೊಲೆ ಕೇಸ್ನ ತನಿಖೆ ಎನ್ಐಎಗೆ ವಹಿಸ್ತೇವೆ. ಹತ್ಯೆಗೆ ಬೆಂಬಲ ನೀಡಿದ ಎಲ್ಲರ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ” ಎಂದರು.
ಇನ್ನು ಸಿಎಂ ಬೊಮ್ಮಾಯಿ ಸೇರಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಾಥ್ ನೀಡಿದರು.