ಬೆಂಗಳೂರು: ಕಾಂಗ್ರೆಸ್ ಸರ್ಕಾರವಾಗಿದ್ದರೆ ಕಲ್ಲು ಹೊಡೆಯಬಹುದಿತ್ತು ಹೀಗಂತ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾತನಾಡಿದ್ದಾರೆ ಎನ್ನಲಾದ ಆಡಿಯೋವೊಂದು ವೈರಲ್ ಆಗಿದ್ದು, ಸಂಸದರು ಮಾತನಾಡಿದ್ದಾರೆ ಎನ್ನಲಾದ ಮಾತು ಈಗ ವಿವಾದಕ್ಕೆ ಕಾರಣವಾಗಿದ್ದು, ಸಂಸದರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ತೇಜಸ್ವಿ ಸೂರ್ಯ ಹಾಗೂ ಚಿಕ್ಕಮಗಳೂರು ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸಂದೀಪ್ ಅರವಿನಗಂಡಿ ಮಾತುಕತೆಯ ಆಡಿಯೋ ವೈರಲ್ ಆಗಿದ್ದು, ರಾಜೀನಾಮೆ ಬಗ್ಗೆ ಮಾತನಾಡುತ್ತಿದ್ದ ವೇಳೆಯಲ್ಲಿ ಈ ಬಗ್ಗೆ ಸಂಸದ ತೇಜಸ್ವಿಯವರು ಹೇಳಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.