ಬೆಂಗಳೂರು : ರಾಜ್ಯದ ಎಲ್ಲ ಖಾಸಗಿ ಶಾಲೆಗಳು ಮುಂದಿನ ಶೈಕ್ಷಣಿಕ ವರ್ಷದ ಶುಲ್ಕವನ್ನು ಪ್ರತಿ ವರ್ಷ ಡಿಸೆಂಬರ್ ಅಂತ್ಯದೊಳಗೆ ಶಾಲೆಯ ಸೂಚನಾ ಫಲಕ ಹಾಗೂ ಇಲಾಖೆಯ ವೆಬ್ ಸೈಟ್ ನಲ್ಲಿ ಪ್ರಕಟಿಸಿ ಅದರಂತೆ ಶುಲ್ಕವನ್ನು ಪಡೆಯಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚನೆ ನೀಡಿದೆ.
Good NEWS : ರಾಜ್ಯದ ರೈತರು, ದಲಿತರು, ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ : 5 ಹೊಸ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ
ಖಾಸಗಿ ಶಾಲೆಗಳು ತಮ್ಮ ಮನಬಂದಂತೆ ಶುಲ್ಕ ಪಡೆಯುತ್ತಿವೆ. ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸುತ್ತಿಲ್ಲವೆಂದು ಆರೋಪಿಸಿ ಹೈಕೋರ್ಟ್ ನಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ಹೈಕೋರ್ಟ್ 2022 ರ ಮೇ 23 ರಂದು ತೀರ್ಪಿನ ಪ್ರಕಾರ ಹಾಗೂ ಖಾಸಗಿ ಶಾಲಾ ಅಡಳಿತದ ಮಾರ್ಗಸೂಚಿಯಂತೆ 2019-2020 ನೇ ಸಾಲಿನಿಂದ ಶುಲ್ಕ ನಿಗಿದ ಆದೇಶ ಬಂದಿದೆ. ಆ ಪ್ರಕಾರ ರಾಜ್ಯದ ಎಲ್ಲಾ ಖಾಸಗಿ ಶಾಲೆಗಳು ಡಿಸೆಂಬರ್ ನೊಳಗೆ ವಿವರಗಳನ್ನು ಪ್ರಕಟಿಸುವಂತೆ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.