ಹಾವೇರಿ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಗ್ರಾಮೀಣ ಭಾಗದ ರೈತರಿಗೆ ರೂ. 57000/-ಗಳ ಧನ ಸಹಾಯದೊಂದಿಗೆ ದನದದೊಡ್ಡಿ ನಿರ್ಮಾಣ ಕಾಮಗಾರಿಗೆ ಆಯುಕ್ತಾಲಯದಿಂದ ಹೊಸ ಆದೇಶ ಹೊರಡಿಸಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ ರೋಷನ್ ಅವರು ತಿಳಿಸಿದ್ದಾರೆ.
BIGG NEWS : ಅಜಾದಿ ಕಾ ಅಮೃತ ಮಹೋತ್ಸವ : ರಾಜ್ಯದ ಎಲ್ಲ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಆಯೋಜನೆ
ಈ ಮೊದಲು ಎಸ್.ಸಿ. ಮತ್ತು ಎಸ್.ಟಿ. ಕುಟುಂಬಗಳಿಗೆ ಮಾತ್ರ ರೂ. 43,000/-ಗಳು ಇತರೆ ಕುಟುಂಬಗಳಿಗೆ ರೂ. 22,000/-ಗಳನ್ನು ದನದ ದೊಡ್ಡಿ ನಿರ್ಮಾಣಕ್ಕಾಗಿ ನೀಡಲಾಗುತ್ತಿತ್ತು. ದಿನಾಂಕ 20-07-2022 ರಂದು 4 ಜಾನುವಾರುಗಳಿಗೆ ರೂ. 57,000/-ಗಳ ಎಲ್ಲ ವರ್ಗದ ಜನರಿಗೆ ವೈಯಕ್ತಿಕ ಆಧಾರಿತ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲೆಮಾರಿ ಬುಡುಕಟ್ಟಗಳು, ಅಧಿಸೂಚನೆಯಿಂದ ಕೈಬಿಟ್ಟ ಬುಡಕಟ್ಟುಗಳು, ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು , ಮಹಿಳಾ ಪ್ರಧಾನ ಕುಟುಂಬಗಳು, ವಿಕಲಚೇತನ ಕುಟುಂಬಗಳು, ಭೂ-ಸುಧಾರಣಾ ಫಲಾನುಭವಿಗಳು, ವಸತಿ ಯೋಜನೆಯಗಳ ಫಲಾನುಭವಿಗಳು, ಅರಣ್ಯ ಹಕ್ಕು ಕಾಯ್ದೆ 2006ರ ಫಲಾನುಭವಿಗಳು ಹಾಗೂ ಸಣ್ಣ ಮತ್ತು ಅತೀ ಸಣ್ಣ ರೈತರ ಕುಟುಂಬಗಳು ಸದರಿ ಯೋಜನೆಯಡಿ ವೈಯಕ್ತಿಕ ಕಾಮಗಾರಿಗಳ ಪಡೆಯಲು ಅರ್ಹರಾಗಿದ್ದಾರೆ.
ಜಿಲ್ಲೆಯ ಗ್ರಾಮೀಣ ಭಾಗದ ರೈತರು ವೈಯಕ್ತಿಕ ದನದ ದೊಡ್ಡಿ ನಿರ್ಮಾಣಕ್ಕಾಗಿ ತಮ್ಮ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಿ ಹೆಸರು ನೋದಾಯಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.