ರಾಮನಗರ : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮವಾಗಲಿದೆ ಎಂದು ರಾಮನಗರದಲ್ಲಿ ಸಚಿವ ಅಶ್ವತ್ಥನಾರಾಯಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹತ್ಯೆಗೈದ ಹಂತಕರಿಗೆ ನಿರ್ದಾಕ್ಷಿಣ್ಯ ಕ್ರಮವಾಗಲಿದೆ. ನಡುಕ ಹುಟ್ಟಿಸೋ ಕಾಲ ಸನಿಹವಾಗಿದೆ. ಎನ್ಕೌಂಟರ್ ಮಾಡುವ ಕಾಲ ಬಂದಿದೆ. ಪ್ರವೀಣ್ ನೆಟ್ಟಾರು ಹತ್ಯೆಯಂತೆ ಬೇರ್ಯಾರ ಹತ್ಯೆ ಆಗಬಾರದು. ರಾಮನಗರದಲ್ಲಿ ಸಚಿವ ಅಶ್ವತ್ಥನಾರಾಯಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.