ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆಸಲಾಗಿದ್ದಂತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಇದೀಗ ಎನ್ಐಎ ತನಿಖೆಗೆ ವಹಿಸಿ ಆದೇಶಿಸಿದೆ.
ಈ ಸಂಬಂಧ ರಾಜ್ಯ ಸರ್ಕಾರ ಆದೇಶಿಸಿದೆ. ಪ್ರವೀಣ್ ಹತ್ಯೆ ಹಿಂದೆ ಅಂತರರಾಜ್ಯದ ನಂಟಿರೋದಾಗಿ ಹೇಳಲಾಗುತ್ತಿದೆ. ಆ ಕುರಿತಂತೆ ತನಿಖೆ ನಡೆಸಿ ಹತ್ಯೆಯ ಆರೋಪಿಗಳ ಸಮಗ್ರ ಮಾಹಿತಿ ಕಲೆ ಹಾಕಿ, ತಪ್ಪಿತಸ್ತರಿಗೆ ಶಿಕ್ಷೆ ಕೊಡಿಸೋ ನಿಟ್ಟಿನಲ್ಲಿ ಎನ್ಐಎ ತನಿಖೆಗೆ ವಹಿಸಿದೆ.
ಮತ್ತೊಂದೆಡ ದಕ್ಷಿಣ ಕನ್ನಡ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಹತ್ಯೆಗೀಡಾದಂತ ಹಿಂದೂ ಕಾರ್ಯಕರ್ತ ಪ್ರವೀಣ್ ಕೊಲೆ ಖಂಡಿಸಿ, ಪ್ರತಿಭಟನೆ ನಡೆಸಿದ್ದ ವೇಳೆಯಲ್ಲಿ, ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಹೀಗೆ ಲಾಠಿ ಚಾರ್ಜ್ ನಡೆಸಿದ್ದರಿಂದ ಪೊಲೀಸರ ಕ್ರಮಕ್ಕೆ, ಕಾರ್ಯಕರ್ತರು ಕಿಡಿಕಾರಿದ್ದರು. ಜೊತೆಗೆ ಸಿಎಂ ಬೊಮ್ಮಾಯಿ ವಿರುದ್ಧವೂ ಘೋಷಣೆ ಕೂಗಿದ್ದರು. ಅಲ್ಲದೇ ಲಾಠಿ ಚಾರ್ಜ್ ಗೆ ಕಾರಣವಾದಂತ ಅಧಿಕಾರಿಗಳನ್ನು ವರ್ಗಾವಣೆಗೂ ಒತ್ತಾಯಿಸಿದ್ದರು. ಹೀಗಾಗಿ ಬಿಜೆಪಿ ಕಾರ್ಯಕರ್ತರ ಒತ್ತಡಕ್ಕೆ ರಾಜ್ಯ ಸರ್ಕಾರ ಮಣಿದು, ಕೆಲ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.