ಜಮ್ಮು ಮತ್ತು ಕಾಶ್ಮೀರ : ಜಮ್ಮು& ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್ಕೌಂಟರ್ನಲ್ಲಿ ಸಿಕ್ಕಿಬಿದ್ದ ಇಬ್ಬರು ಭಯೋ ಭಯೋತ್ಪಾದಕರ ಪೈಕಿ ಒಬ್ಬನನ್ನು ಹತ್ಯೆ ಮಾಡಲಾಗಿದೆ. ಇನ್ನೊಬ್ಬನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
#BaramullaEncounterUpdate: 01 #terrorist killed. Search going on. Further details shall follow.@JmuKmrPolice https://t.co/w1LdIMYL9c
— Kashmir Zone Police (@KashmirPolice) July 30, 2022
ಬಾರಾಮುಲ್ಲಾ ಜಿಲ್ಲೆಯ ಕ್ರೀರಿ ಪ್ರದೇಶದ ವನಿಗಂ ಬಾಲಾದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ಭಯೋತ್ಪಾದಕರು ಮತ್ತು ಸೇನೆಯ ನಡುವೆ ಎನ್ಕೌಂಟರ್ ನಡೆದಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಸಂಘಟನೆಯೊಂದಿಗೆ ನಂಟು ಹೊಂದಿದ್ದ ಇಬ್ಬರು ಹೈಬ್ರಿಡ್ ಭಯೋತ್ಪಾದಕರನ್ನು ಬಂಧಿಸಿತ್ತು.