ಅರ್ಜೀಲಿಂಗ್ (ಪಶ್ಚಿಮ ಬಂಗಾಳ) : ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ನ ಧುಧಿಯಾದಲ್ಲಿ ಬಾಲಸೋನ್ ನದಿಯಲ್ಲಿ ಪಿಕ್ನಿಕ್ಗೆ ತೆರಳಿ, ಅಲ್ಲೇ ಸಿಲುಕಿದ್ದ 11 ಕಾಲೇಜು ವಿದ್ಯಾರ್ಥಿಗಳ ಗುಂಪನ್ನು ಅಗ್ನಿಶಾಮಕ ದಳದವರು ಭಾನುವಾರ ರಕ್ಷಿಸಿದ್ದಾರೆ.
ಬೆಳಿಗ್ಗೆ 11 ಗಂಟೆ ಸುಮಾರಿಗೆ ವಿದ್ಯಾರ್ಥಿಗಳ ಗುಂಪು ಧುಧಿಯಾಗೆ ಭೇಟಿ ನೀಡಿತು ಎಂದು ವರದಿಯಾಗಿದೆ. ಬೆಟ್ಟಗಳಲ್ಲಿ ಭಾರೀ ಮಳೆಯಿಂದಾಗಿ ನದಿಯ ನೀರಿನ ಮಟ್ಟವು ಇದ್ದಕ್ಕಿದ್ದಂತೆ ಹೆಚ್ಚಾದ ಪರಿಣಾಮ ವಿದ್ಯಾರ್ಥಿಗಳು ಅಲ್ಲೇ ಸಿಲುಕಿದ್ದರು. ಈ ಬಗ್ಗೆ ಸ್ಥಳೀಯ ನಿವಾಸಿಗಳು ಧುಧಿಯಾ ಪ್ರದೇಶದಲ್ಲಿ ನದಿಯಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಬಗ್ಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು.
ಕೊನೆಗೆ ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳ ಎಂಟು ಗಂಟೆಗಳ ಕಠಿಣ ಪ್ರಯತ್ನದ ನಂತರ ಸಿಕ್ಕಿಬಿದ್ದ ವಿದ್ಯಾರ್ಥಿಗಳನ್ನು ರಕ್ಷಿಸಲಾಯಿತು.
BIG NEWS: ಆ.6ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿ
Bank Holidays 2022: ಆಗಸ್ಟ್ನಲ್ಲಿ ಬ್ಯಾಂಕ್ಗಳು ʻ18 ದಿನʼ ಬಂದ್: ಇಲ್ಲಿದೆ ರಜಾ ದಿನಗಳ ಪಟ್ಟಿ…