ಮಂಗಳೂರು: ಬೆಳ್ಳಾರೆಯಲ್ಲಿ ಮಸೂದ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮನೆಗೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಈ ವೇಳೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಐದು ಲಕ್ಷ ಪರಿಹಾರ ಘೋಷಿಸಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರ ಬೇಜವಾಬ್ದಾರಿತನ ಕಾಣುತ್ತಿದೆ ಎಂದು ಬೆಳ್ಳಾರೆಯಲ್ಲಿ ಹೆಚ್ ಡಿಕೆ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತ ಪ್ರವೀಣ್ ಮನೆಗೆ ಭೇಟಿ ನೀಡಿದ್ದರು. ಆದರೆ ಅವರು ಮಸೂದ್ ಮನೆಗೆ ಬರಲಿಲ್ಲ . ಮಸೂದ್ ಹತ್ಯೆಯಲ್ಲಿ ವಿಚಿತ್ರ ಸನ್ನಿವೇಶವಿದೆ. ಅವರ ಸಾವಿಗೆ ಕಾರಣ ಏನು ಅಂತ ನನಗೆ ಗೊತ್ತಿದೆ. ಈ ಬಗ್ಗೆ ನಾನು ಪೊಲೀಸರ ಗಮನಕ್ಕೆ ತರುತ್ತೇನೆ ಎಂದರು.
ಮಸೂದ್ ಹತ್ಯೆ ಹಿಂದೆ ಯಾವುದೇ ಸಂಘಟನೆ ಮತ್ತು ರಾಜಕೀಯ ಪಕ್ಷದ ಸಂಪರ್ಕವಿಲ್ಲ. ಆದರೆ ಹಿಂದೂ ಸಮುದಾಯದವರಿಂದಲೇ ಮಸೂದ್ ಹತ್ಯೆ ಸ್ಕೆಚ್ ನಡೆದಿದೆ. ಹೀಗಾಗಿ ಅವರ ಕೊಲೆಯ ಸತ್ಯಾಸತ್ಯತೆ ಹೊರಗೆ ಬರಬೇಕು ಎಂದು ಹೆಚ್ ಡಿಕೆ ಆಗ್ರಹಿಸಿದ್ದಾರೆ.