ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದ ಖಾಸಗಿ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಈ ಅಗ್ನಿ ದುರಂತದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ಹಲವಾರು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕೆಲಸ ನಡೆಯುತ್ತಿದೆ.
ದಾಮೋಹ್ ನಾಕಾ ಶಿವನಗರದಲ್ಲಿರುವ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಗಳು ತಿಳಿಸಿವೆ.
ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.