ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಮತ್ತೆ ಶುರುವಾಗಿದ್ದು, ಇಂದಿನಿಂದ ಮುಂದಿನ 4 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
BIGG NEWS : ‘ಮಂಕಿಪಾಕ್ಸ್ ಸೋಂಕು’ ನಿಯಂತ್ರಣಕ್ಕೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ
ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ. ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇಂದಿನಿಂದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಮೂರು ದಿನ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಆಗಸ್ಟ್ 3, 4ರಂದು ಮಳೆಯಾಗಲಿದೆ. ಮಂಡ್ಯ ಮತ್ತು ರಾಮನಗರದಲ್ಲಿ ಆಗಸ್ಟ್ 4ರಂದು ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ಉತ್ತರ ಕರ್ನಾಟಕದ ಧಾರವಾಡ, ಗದಗ, ಬಳ್ಳಾರಿ ಬಾಗಲಕೋಟೆ, ವಿಜಯಪುರ ಮತ್ತು ಕಲಬುರಗಿಯಲ್ಲಿ ಆಗಸ್ಟ್ 4 ರವರೆಗೆ ಮಳೆಯಾಗಲಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಮೈಸೂರು, ಆಗಸ್ಟ್ 4ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.