ಕೊಪ್ಪಳ : ಸಾವಿರಾರು ವರ್ಷಗಳಿಂದಲೂ ಅಂಜನಾದ್ರಿಯ ಕಿಷ್ಕಿಂದೆ ಪ್ರದೇಶ ಇದೇ ಆಗಿರುವ ವಿಷಯ ಜನಜನಿತವಾಗಿದ್ದು, ಜನರ ನಂಬಿಕೆಗಿಂತ ಇನ್ನಾವುದೇ ಪುರಾವೆ ಬೇಕಾಗಿಲ್ಲ. ಹೀಗಾಗಿ ಆಂಜನೇಯ ಹುಟ್ಟಿದ ಸ್ಥಳ ವಿವಾದದ ಬಗ್ಗೆ ಚರ್ಚೆ ಮಾಡುವ ಅಗತ್ಯವೇ ಇಲ್ಲ. ಸಾವಿರ ಬಾರಿ ಹೇಳುತ್ತೇನೆ, ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕು ಬಳಿಯ ಅಂಜನಾದ್ರಿ ಬೆಟ್ಟ ಕಿಷ್ಕಿಂದೆಯೇ ಹನುಮ ಜನಿಸಿದ ನಾಡು ಎಂದು. ಅಂತರಾಷ್ಟ್ರೀಯ ಮಟ್ಟದಲ್ಲಿ ಈ ಪ್ರದೇಶವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
Big news: ಶಸ್ತ್ರಚಿಕಿತ್ಸೆಯಿಲ್ಲದೇ ವ್ಯಕ್ತಿಯ ಹೊಟ್ಟೆಯಿಂದ 50 ಕ್ಕೂ ಹೆಚ್ಚು ನಾಣ್ಯಗಳನ್ನು ಹೊರತೆಗೆದ ವೈದ್ಯರು!
ಅಂಜನಾದ್ರಿ ಬೆಟ್ಟ ಪ್ರದೇಶಕ್ಕೆ ಭೇಟಿ ನೀಡುವ ಸಲುವಾಗಿ ಗಂಗಾವತಿ ತಾಲ್ಲೂಕು ಆನೆಗೊಂದಿ ಬಳಿ ನಿರ್ಮಿಸಿದ್ದ ಹೆಲಿಪ್ಯಾಡ್ಗೆ ಸೋಮವಾರ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಗೋವಾ, ಮಹಾರಾಷ್ಟ್ರ, ಆಂಧ್ರಪ್ರದೇಶ ಹೀಗೆ ವಿವಿಧ ರಾಜ್ಯಗಳು ಆಂಜನೇಯ ಹುಟ್ಟಿದ ಸ್ಥಳದ ಬಗ್ಗೆ ವಿವಾದ ಮಾಡುತ್ತಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಆಂಜನೇಯ ಹುಟ್ಟಿದ್ದು ಇಲ್ಲಿನ ಅಂಜನಾದ್ರಿ ಕಿಷ್ಕಿಂದೆಯಲ್ಲಿಯೇ ಎಂದು ಸಾವಿರಾರು ವರ್ಷಗಳಿಂದ ಜನಜನಿತವಾಗಿದೆ. ಇಡೀ ಭಾರತ ವಾಸಿಗಳು ಇದನ್ನು ನಂಬಿದ್ದಾರೆ. ಸಾವಿರಬಾರಿ ಹೇಳುವೆ ಆಂಜನೇಯ ಹುಟ್ಟಿದ್ದು, ಇದೇ ಅಂಜನಾದ್ರಿಯ ಕಿಷ್ಕಿಂದೆಯಲ್ಲಿ ಎಂದು ಘೋಷಿಸಿದ ಮುಖ್ಯಮಂತ್ರಿಗಳು ಇದಕ್ಕೆ ಇನ್ನಾವುದೇ ಪುರಾವೆಯನ್ನು ನಾವು ನೀಡಬೇಕಾಗಿಲ್ಲ ಹಾಗೂ ಇದನ್ನು ಪದೇ ಪದೇ ಚರ್ಚಿಸುವ ಅಗತ್ಯವೂ ಇಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು.
ಸಾಂಕ್ರಾಮಿಕ ರೋಗದ ಹೊರತಾಗಿಯೂ ಭಾರತದ ಆರ್ಥಿಕತೆ ವೇಗವಾಗಿ ಬೆಳೆಯುತ್ತಿದೆ : ನಿರ್ಮಲಾ ಸೀತಾರಾಮನ್
ಆರಾಧ್ಯ ದೈವವಾಗಿರುವ ಆಂಜನೇಯ ಸ್ವಾಮಿಯ ಜನ್ಮಸ್ಥಳದ ಸಮಗ್ರ ಅಭಿವೃದ್ಧಿಗೆ ಬಜೆಟ್ನಲ್ಲಿ ಘೊಷಿಸಿ, 100 ಕೋಟಿ ರೂ. ಅನುದಾನಕ್ಕೆ ಸರ್ಕಾರ ಆದೇಶ ಹೊರಡಿಸಿದೆ. ಅಂಜನಾದ್ರಿ ಬೆಟ್ಟ ಪ್ರದೇಶಕ್ಕೆ ಆಗಮಿಸುವ ಯಾತ್ರಿಕರೆಗೆ ಸೂಕ್ತ ರೀತಿಯಲ್ಲಿ ಸಂಪರ್ಕ ರಸ್ತೆ, ವಸತಿ ವ್ಯವಸ್ಥೆ, ಯಾತ್ರಿ ನಿವಾಸ, ಆಸ್ಪತ್ರೆ, ಪಾರ್ಕಿಂಗ್, ಮಾರುಕಟ್ಟೆ ಮುಂತಾದ ವ್ಯವಸ್ಥೆಗಳನ್ನು ಕೈಗೊಳ್ಳಬೇಕಿದೆ. ವಯಸ್ಕರು ಹಾಗೂ ಮಕ್ಕಳು ಕೂಡ ಅಂಜನಾದ್ರಿ ಬೆಟ್ಟಕ್ಕೆ ಹೋಗಿಬರಲು ಅನುಕೂಲವಾಗುವಂತೆ ರೋಪ್ವೇ ನಿರ್ಮಿಸಲಾಗುವುದು. ಇದಕ್ಕಾಗಿ ಶೀಘ್ರ ಟೆಂಡರ್ ಕರೆಯಲಾಗುವುದು. ಈ ಪ್ರದೇಶ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕು. ಇದಕ್ಕಾಗಿ ಮಾಸ್ಟರ್ ಪ್ಲಾನ್ ಸಿದ್ಧಪಡಿಸಲಾಗಿದ್ದು, ಮೈಸೂರು, ಹಂಪಿ ಅಂತರಾಷ್ಟ್ರೀಯ ಟೂರಿಸಂ ಸರ್ಕ್ಯೂಟ್ ನಿರ್ಮಾಣಕ್ಕೆ ಬಜೆಟ್ನಲ್ಲಿ ಘೋಷಿಸಲಾಗಿದೆ. ಇದರನ್ವಯ ಹಂಪಿ ಸುತ್ತ ಮುತ್ತ ಆರ್ಕಲಾಜಿಕಲ್ ಪ್ರದೇಶ ಹೊರತುಪಡಿಸಿ, ಉಳಿದ ಪ್ರದೇಶಗಳಲ್ಲಿ ಅಭಿವೃದ್ಧಿಪಡಿಸಲಾಗುವುದು. ಅಂತರಾಷ್ಟ್ರೀಯ ಹಾಗೂ ಎಲ್ಲ ರೀತಿಯ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲಾಗುವುದು. ಅಗತ್ಯವಿರುವ ಭೂಸ್ವಾಧೀನಕ್ಕಾಗಿ ಈಗಾಗಲೆ 24 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ ಎಂದರು.
ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್, ಪ್ರವಾಸೋದ್ಯಮ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ಸಿಂಗ್, ನಗರಾಭಿವೃದ್ದಿ ಸಚಿವ ಬಿ.ಎ. ಬಸವರಾಜ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಮುಜರಾಯಿ ಸಚಿವರಾದ ಶಶಿಕಲಾ ಜೊಲ್ಲೆ, ಸಂಸದ ಕರಡಿ ಸಂಗಣ್ಣ, ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ದಢೇಸೂಗೂರು, ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ್, ಶಶಿಲ್ ನಮೋಶಿ, ಜಿಲ್ಲಾಧಿಕಾರಿ ಸುಂದರೇಶ ಬಾಬು, ಜಿ.ಪಂ. ಸಿಇಒ ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಸೇರಿದಂತೆ ವಿವಿಧ ಗಣ್ಯರು ಈ ಸಂದರ್ಭದಲ್ಲಿ ಇದ್ದರು.
ಸುದ್ದಿಗೋಷ್ಟಿಯ ಬಳಿಕ ಮುಖ್ಯಮಂತ್ರಿಗಳು ಇದೇ ಆವರಣದಲ್ಲಿ ಸಾರ್ವಜನಿಕರು, ವಿವಿಧ ಸಂಘಟನೆಗಳಿಂದ ಮನವಿಗಳನ್ನು ಸ್ವೀಕರಿಸಿದರು.