ಹುಬ್ಬಳ್ಳಿ : ರಾಜ್ಯದ ಸರ್ಕಾರಿ ಕಚೇರಿಯಲ್ಲಿ ಪ್ರಿಪೇಡ್ ವಿದ್ಯುತ್ ಮೀಟರ್ ಅಳವಡಿಕೆಗೆ ಚಿಂತನೆ ನಡೆಸಲಾಗಿದೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.
BIGG NEWS : ಗದಗ ಜಿಲ್ಲೆಯಲ್ಲಿ ನಿರಂತರ ಮಳೆ : ಇಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಕಚೇರಿಗಳು ವಿದ್ಯುತ್ ಬಿಲ್ ಬಾಕಿ ಇಟ್ಟುಕೊಳ್ಳುತ್ತಿದ್ದು, ಯಾವ್ಯಾವ ಸರ್ಕಾರಿ ಇಲಾಖೆಯಲ್ಲಿ ವಿದ್ಯುತ್ ಬಿಲ್ ಬಾಕಿಯಿದೆ ಎಂದು ಪರಿಶೀಲಿಸಿ, ಅದನ್ನು ಪಾವತಿಸುವಂತೆ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳುತ್ತೇವೆ. ಮುಂದಿನ ದಿನಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಪ್ರಿಪೇಡ್ ಮೀಟರ್ ಅಳವಡಿಸುವ ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ.
ಇನ್ನು ರಾಜ್ಯದಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗಾಗಿ ಹೊಸದಾಗಿ ರಾಜ್ಯದ 37 ಕಡೆಗಳಲ್ಲಿ ನೂತನ ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಆದ್ಯತೆ ಮೇರೆಗೆ ಉಪ ಕೇಂದ್ರ ಸ್ಥಾಪನೆ ಕಾರ್ಯ ನಡೆಯುತ್ತಿದೆ. ಮತ್ತಷ್ಟು ಉಪಕೇಂದ್ರ ಸ್ಥಾಪಿಸಲು ಹೆಸ್ಕಾಂ ವ್ಯಾಪ್ತಿಯಲ್ಲಿ ಬೇಡಿಕೆಗಳು ಬರುತ್ತಿವೆ ಎಂದು ಹೇಳಿದ್ದಾರೆ.