ಬೆಂಗಳೂರು: ನಗರದಲ್ಲಿ ಅನಧಿಕೃತವಾಗಿ ಪ್ಲೆಕ್ಸ್ ಬ್ಯಾನರ್ ಗಳನ್ನು ಬಿಬಿಎಂಪಿ ತೆರವು ಮಾಡುತ್ತಿದ್ದಾರೆ. ಅನುಮತಿ ಇಲ್ಲದೆ ನಿರ್ಮಾಣವಾಗಿರುವ ಅಂಗಡಿ ಮತ್ತು ಬ್ಯಾನರ್ ಗಳನ್ನು ಬಿಬಿಎಂಪಿ ಅಧಿಕಾರಿಗಳು ತೆರವುಗೊಳಿಸಿದ್ದಾರೆ.
ನಗರದಲ್ಲಿ ಫ್ಲೆಕ್ಸ್ ಆಳವಡಿಕೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.ಫ್ಲೆಕ್ಸ್ ಬ್ಯಾನರ್ ಬಳಕೆ ಮಾಡಬಾರದು ಅಂತಾ ನಿರ್ದೇಶನ ಇದ್ರೂ ಜನಪ್ರತಿನಿಧಿಗಳೇ ಇದನ್ನು ಉಲ್ಲಂಘಿಸುತ್ತಿದ್ದಾರೆ. ಇವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕೋಕೆ ಬಿಬಿಎಂಪಿ ಹಿಂದೇಟು ಹಾಕುತ್ತಿದೆ. ಆದರೆ ಈಗ ಕೊನೆಗೂ ಎಚ್ಚೆತ್ತು ಗಾಂಧಿನಗರದಲ್ಲಿ ಅಕ್ರಮ ಪ್ಲೆಕ್ಸ್ ಬ್ಯಾನರ್ ಅಂಗಡಿಗಳಿಗೆ ಬಿಸಿ ಮುಟ್ಟಿಸಿದೆ.