ಬಳ್ಳಾರಿ:ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ 2022-23ನೇ ಸಾಲಿಗೆ ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆ ಅಡಿ ನಿಗಮದ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಯುವಜನರಿಗೆ ಕೌಶಲ್ಯ ಅಭಿವೃದ್ದಿಪಡಿಸಿ ಉದ್ಯೋಗಮುಖಿಯನ್ನಾಗಿಸಲು ಸರ್ಕಾರದ ಸಂಸ್ಥೆಗಳಾದ IಖಿI’s ಉಖಿIಅ, ಏಉಖಿಖಿI ರಲ್ಲಿ ಅಲ್ಪಾವದಿ ಕೋರ್ಸ್ಗಳ ಮೂಲಕ ಕೌಶಲ್ಯ ತರಬೇತಿ ನೀಡಲು ಕೌಶಲ್ಯ ಕರ್ನಾಟಕ ತಂತ್ರಾಂಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹತೆಗಳು: 10ನೇ ತರಗತಿ / ದ್ವೀತಿಯ / ಪಿಯುಸಿ / ಡಿಪ್ಲೋಮಾ / ಪದವಿ / ಇಂಜನಿಯರಿಂಗ್ ವ್ಯಾಸಂಗವನ್ನು ಪೂರ್ಣಗೊಳಿಸಿರಬೇಕು.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾತಿ ಪಟ್ಟಿಯಲ್ಲಿ ನಮೂದಿಸಿದ ಮೇಲ್ಕಂಡ ನಿಗಮದÀ ವ್ಯಾಪ್ತಿಗೆ ಒಳಪಡುವ ಜಾತಿಗಳಿಗೆ ಸೇರಿದವರಾಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 25 ವರ್ಷಗಳ ಒಳಗಿರಬೇಕು. ಪ್ರವರ್ಗ 3ಬಿ ಗೆ ಸೇರಿದ ಅರ್ಜಿದಾರರ ಕುಟುಂಬ ವಾರ್ಷಿಕ ವರಮಾನ/ಆದಾಯ ರೂ.8 ಲಕ್ಷಗಳಿಗಿಂತ ಕಡಿಮೆ ಇರಬೇಕು. ಅರ್ಜಿದಾರರು https://www.kaushalkar.com/ ಜಾಲತಾಣದೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಮೇಲ್ಕಂಡ ನಿಗಮದ http://kvldcl.karnataka.gov.in ವೆಬ್ಸೆಟ್ನ್ನು ಸಂಪರ್ಕಿಸುವುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ಕೇಂದ್ರ ಕಚೆÉೀರಿಯ ದೂ.080-22865522, ಮೊ.9900012352 ಅಥವಾ ಆಯಾ ಜಿಲ್ಲಾ ಕಚೆÉೀರಿಯ ದೂರವಾಣಿ ಸಂಖ್ಯೆಗಳನ್ನು ವೆಬ್ ಸೈಟ್ನಲ್ಲಿ ನೀಡಲಾಗಿದ್ದು,ಅವುಗಳನ್ನು ಸಂಪರ್ಕಿಸಬಹುದಾಗಿದೆ.
ಆನ್ ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ/ದಾಖಲೆಗಳೊಂದಿಗೆ ಆ.29ರೊಳಗೆ ಸಲ್ಲಿಸಬೇಕು.
ಸೂಚನೆ: ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸುವಂತಿಲ್ಲ. ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾ ವ್ಯವಸ್ಥಾಪಕರ ಕಚೆÉೀರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ / ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಕಚೇರಿಯ ಅವಧಿಯಲ್ಲಿ ಉಚಿತವಾಗಿ ಆನ್ ಲೈನ್ನಲ್ಲಿ ಅರ್ಜಿ ಸಲ್ಲಿಸುವ ವ್ಯವಸ್ಥೆ ಇರುತ್ತದೆ ಎಂದು ಅವರು ತಿಳಿಸಿದ್ದಾರೆ.