ಬೆಂಗಳೂರು : ಕರಾವಳಿ,ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
BIGG NEWS : ರಾಜ್ಯ ಸರ್ಕಾರದಿಂದ ಕಂದಾಯ ಜಾಗದಲ್ಲಿ ಮನೆ ನಿರ್ಮಿಸಿಕೊಂಡ ಬಡವರಿಗೆ ಭರ್ಜರಿ ಗುಡ್ ನ್ಯೂಸ್
ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಆಗಸ್ಟ್ 6 ರವರೆಗೆ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಶನಿವಾರದವರೆಗೆ ರೆಡ್ ಅಲರ್ಟ್ ಇರಲಿದೆ. ಮಲೆನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗೆ ಶುಕ್ರವಾರದವರೆಗೆ ರೆಡ್ ಅಲರ್ಟ್ ಇರಲಿದೆ.
BIGG NEWS : ರಾಜ್ಯಾದ್ಯಂತ ವರುಣಾರ್ಭಟಕ್ಕೆ 11 ಬಲಿ : 550 ಕ್ಕೂ ಹೆಚ್ಚು ಮನೆಗಳು ಜಲಾವೃತ
ಇನ್ನು ಮೈಸೂರು, ಶಿವಮೊಗ್ಗ, ಹಾಸನ, ತುಮಕೂರು, ಹಾವೇರಿ, ಬೆಳಗಾವಿ, ಗದಗ, ಧಾರವಾಡ, ವಿಜಯಪುರ, ಕಲಬುರಗಿ ಮತ್ತು ಬೀದರ್ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಗುರುವಾರ ಶುಕ್ರವಾರ ಬೆಳಗಾವಿ, ಬಾಗಲಕೋಟೆ, ಮೈಸೂರು, ಚಾಮರಾಜನಗರ, ತುಮಕೂರು ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
BIGG NEWS : ದಾವಣಗೆರೆಯಲ್ಲಿ ಇಂದು `ಸಿದ್ದರಾಮಯ್ಯ ಅಮೃತೋತ್ಸವ’ : ರಾಹುಲ್ ಗಾಂಧಿ ಸೇರಿ ಘಟನಾನುಘಟಿಗಳು ಭಾಗಿ