ಗುವಾಹಟಿ: ಅಸ್ಸಾಂನ ಬೊಂಗೈಗಾಂವ್ ರೈಲು ನಿಲ್ದಾಣದಲ್ಲಿ ನಿರ್ಮಾಣ ಹಂತದ ಮೇಲ್ಛಾವಣಿ ಕುಸಿದು ಎಂಟು ಕಾರ್ಮಿಕರು ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ.
ನಿನ್ನೆ ಬೊಂಗೈಗಾಂವ್ ರೈಲ್ವೆ ನಿಲ್ದಾಣದಲ್ಲಿ ನಿರ್ಮಾಣ ಹಂತದ ಮೇಲ್ಛಾವಣಿ ಕುಸಿದು ಎಂಟು ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಗೊಂಡ 8 ಮಂದಿಯಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬೊಂಗೈಗಾಂವ್ ಎಸ್ಪಿ ಸ್ವಪ್ನನೀಲ್ ದೇಕಾ ತಿಳಿಸಿದ್ದಾರೆ.
Assam | Eight labourers got injured after an under-construction roof collapsed at Bongaigaon railway station yesterday
Of the 8 injured, three are in serious condition and have been admitted to a private hospital: Swapnaneel Deka, SP Bongaigaon pic.twitter.com/vgGOH6SzLR
— ANI (@ANI) August 2, 2022
ಹಿಂದಿನ ದಿನ, ಗುರುಗ್ರಾಮ್ನ ಸೆಕ್ಟರ್ -77 ರಲ್ಲಿರುವ ನಿರ್ಮಾಣ ಸ್ಥಳದಲ್ಲಿ 17 ನೇ ಮಹಡಿಗೆ ಟವರ್ ಕ್ರೇನ್ ಅನ್ನು ಸರಿಪಡಿಸುವಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದರು. ಇನ್ನೊಬ್ಬರು ಗಾಯಗೊಂಡಿದ್ದರು. ಸೆಕ್ಟರ್ -77 ರಲ್ಲಿನ ಎಮಾರ್ ಪ್ಲಾಮ್ ಹಿಲ್ಸ್ನ ನಿರ್ಮಾಣ ಹಂತದಲ್ಲಿದ್ದ ವಸತಿ ಕಟ್ಟಡ ಬಳಿ ದುರ್ಘಟನೆ ಸಂಭವಿಸಿತ್ತು.
ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಒಬ್ಬ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತರೆಲ್ಲರೂ ಬಿಹಾರ ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ.