ಹುಬ್ಬಳ್ಳಿ : ಮಾಜಿ ಸಿಎಂ ಸಿದ್ದರಾಮಯ್ಯ ಅವರು 75ನೇ ವಸಂತಕ್ಕೆ ಕಾಲಿಟ್ಟಿದ್ದು ಆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ನಲ್ಲಿ ಮಧ್ಯರಾತ್ರಿ ಕೇಕ್ ಕತ್ತರಿಸುವ ಮೂಲಕ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಸಿದ್ದರಾಮಯ್ಯ ಅವರು ಹುಟ್ಟುಹಬ್ಬ ಆಚರಿಸಿಕೊಂಡರು.
ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮಧ್ಯರಾತ್ರಿ 12 ಗಂಟೆಗೆ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೆ.ಜೆ. ಜಾರ್ಜ್ ಮತ್ತು ಆರ್.ವಿ. ದೇಶಪಾಂಡೆ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಭಾಗಿಯಾದರು.
ಮಾಜಿ ಸಿಎಂ ಸಿದ್ದರಾಮಯ್ಯ ಅವರ 75 ನೇ ಜನ್ಮದಿನದ ಅಂಗವಾಗಿ ಆಗಸ್ಟ್ 3 ರ ಇಂದು ದಾವಣಗೆರೆಯಲ್ಲಿ ಜನ್ಮದಿನ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಲಿದ್ದು, ದಾವಣಗೆರೆ ಸರ್ವ ರೀತಿಯಲ್ಲೂ ಸಜ್ಜಾಗಿದೆ.
ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಸುಮಾರು 7-8 ಲಕ್ಷ ಜನರು ಸೇರುವ ನಿರೀಕ್ಷೆಯಿದ್ದು, ದಾವಣಗೆರೆಯ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಒಡೆತನದ 50 ಎಕರೆ ವಿಸ್ತೀರ್ಣದ ಶಾಮನೂರು ಪ್ಯಾಲೇಸ್ ಗ್ರೌಂಡ್ ನಲ್ಲಿ ಅಮೃತ ಮಹೋತ್ಸವಕ್ಕೆ ಸಕಲ ಸಿದ್ಧತೆ ಮಾಡಲಾಗಿದೆ.
ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ಈಗಾಗಲೇ ರಾಜ್ಯಕ್ಕೆ ಆಗಮಿಸಿದ್ದು, ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಸೇರಿದಂತೆ ಹಿರಿಯ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. ಇಂದು ಸಿದ್ದರಾಮಯ್ಯ ಜನ್ಮದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ವಿವಿಧ ಮಠಗಳಿಗೆ ಭೇಟಿ ನೀಡಲಿದ್ದಾರೆ.
BIGG NEWS : ಆಟವಾಡಲು ಹೋದಾಗ ಘೋರ ದುರಂತ : ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಸಾವು