ಜಬುವಾ (ಮಧ್ಯಪ್ರದೇಶ): ಮಧ್ಯಪ್ರದೇಶದ ಝಬುವಾ ಜಿಲ್ಲೆಯಲ್ಲಿ ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ್ ಆಜಾದ್ ಅವರ ಪ್ರತಿಮೆಗೆ ಅಪರಿಚಿತ ವ್ಯಕ್ತಿಗಳು ಹಾನಿ ಮಾಡಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಜಿಲ್ಲಾ ಕೇಂದ್ರದಿಂದ 60 ಕಿ.ಮೀ ದೂರದಲ್ಲಿರುವ ತಾಂಡ್ಲಾ ಪಟ್ಟಣದಲ್ಲಿ ಸೋಮವಾರ ರಾತ್ರಿ ನಡೆದ ಘಟನೆ ಬೆಳಕಿಗೆ ಬಂದಿದೆ. ಗಸ್ತು ತಿರುಗುತ್ತಿದ್ದಾಗ ಪೊಲೀಸರು ಹಾನಿಯನ್ನು ಗಮನಿಸಿದ್ದಾರೆ ಎಂದು ಸ್ಥಳೀಯ ಪೊಲೀಸ್ ಠಾಣೆ ಪ್ರಭಾರಿ ಕೌಶಲ್ಯ ಚೌಹಾಣ್ ಹೇಳಿದ್ದಾರೆ.
ಸಿಸಿಟಿವಿ ದೃಶ್ಯಗಳ ಮೂಲಕ ದುಷ್ಕರ್ಮಿಗಳನ್ನು ಗುರುತಿಸಲಾಗುವುದು ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರತಿಮೆಯನ್ನು 2017 ರಲ್ಲಿ ಅನಾವರಣಗೊಳಿಸಲಾಯಿತು.
Good News : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ :` IBPS’ನಿಂದ 6,342ಹುದ್ದೆಗಳಿಗೆ ಅರ್ಜಿ ಆಹ್ವಾನ