ಬೆಳಗಾವಿ: ರಾಯಚೂರಿನಲ್ಲಿ ಕಲುಷಿತ ನೀರು ಸಮಸ್ಯೆ ಇದೀಗ ಬೆಳಗಾವಿಗೂ ವ್ಯಾಪಿಸಿದೆ. ಜಿಲ್ಲೆಯ ಬೆನ್ನೂರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 40 ಜನರು ಅಸ್ವಸ್ಥಗೊಂಡಿದ್ದಾರೆ. ಆ ಪೈಕಿ ಚಿಕಿತ್ಸೆ ಫಲಿಸದೇ ವೃದ್ಧರೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
UPDATE: ಆಂಧ್ರದ ಅಚ್ಯುತಪುರಂನಲ್ಲಿ ಅನಿಲ ಸೋರಿಕೆ: 87 ಮಂದಿ ಆಸ್ಪತ್ರೆಗೆ ದಾಖಲು
ಬೆಳಗಾವಿ ಜಿಲ್ಲೆಯ ರಾಮದುರ್ಗ ಸುರೇಬಾನ ಪಂಚಾಯತಿ ವ್ಯಾಪ್ತಿಯ ಬೆನ್ನೂರ ಗ್ರಾಮದಲ್ಲಿ ಕಲುಷಿತ ನೀರನ್ನು ಕುಡಿದು ಸುಮಾರು 40ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಕಳೆದ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಬೆನ್ನೂರು ಗ್ರಾಮದ 85 ವರ್ಷದ ಬಸಪ್ಪ ಖಾನಾಪುರ ಎಂಬ ವೃದ್ಧೆ ಸಾವನ್ನಪ್ಪಿದ್ದಾರೆ. ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ. ಇದೀಗ ವೃದ್ಧನ ಸಾವಿಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳೇ ಕಾರಣ, ಹೀಗಾಗಿ ಆತನ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.