ದಾವಣಗೆರೆ: ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬ ಸಂಭ್ರಮ. ಇದದ ಪ್ರಯುಕ್ತ ದಾವಣಗೆರೆ ಜಿಲ್ಲೆಯಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಸಜ್ಜಾಗಿದೆ. ಈಗಾಗಲೇ ವೇದಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸದ್ದಾರೆ. ವಂದೇ ಮಾತರಂ ಗೀತೆಯ ಮೂಲಕ ಕಾರ್ಯಕ್ರಮವನ್ನು ಶುರು ಮಾಡಿದ್ದಾರೆ.
ಇನ್ನೇನು ಕೆಲವೇ ಕ್ಷಣದಲ್ಲಿ ರಾಹುಲ್ ಗಾಂಧಿ ಆಗಮಿಸಲಿದ್ದಾರೆ. ಈಗಾಗಲೇ ಅವರು ಚಿತ್ರದುರ್ಗದಿಂದ ದಾವಣಗೆರೆಯತ್ತ ಹೊರಟಿದ್ದಾರೆ. ಅವರ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೂಡ ಆಗಮಿಸಲಿದ್ದಾರೆ. ನಗರದ ಎಲ್ಲೆಡೆ ಫ್ಲೆಕ್ಸ್ ಗಳು ರಾರಾಜಿಸುತ್ತಿದೆ. ಇತ್ತ ಅಭಿಮಾನಿಗಳಿಗಂತೂ ಸಂಭ್ರಮ ಮನೆ ಮಾಡಿದೆ.