ಚಿತ್ರದುರ್ಗ: ಇಂದು ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ಉತ್ಸವದಲ್ಲಿ ಭಾಗವಹಿಸುವುದಕ್ಕೂ ಮುನ್ನ ಸಂಸದ ರಾಹುಲ್ ಗಾಂಧಿ, ತ್ರದುರ್ಗದ ಮುರುಘಾ ಮಠಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ, ಶ್ರೀಗಳ ಆಶೀರ್ವಾದ ಪಡೆದು ಕೊಂಡರು, ಇದೇ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುಂದಿನ ಪ್ರಧಾನಿಯಾಗುತ್ತಾರೆ ಎಂದು ಹಾವೇರಿ ಹೊಸಮಠದ ಸ್ವಾಮೀಜಿ ಹೇಳುತ್ತಿದ್ದಂತೆ ಮಧ್ಯಪ್ರವೇಶಿಸಿದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು, ಅವರ ಮಾತನ್ನು ಅರ್ಧಕ್ಕೆ ತಡೆದಿದ್ದಾರೆ ಎನ್ನಲಾಗಿದೆ.
ಇನ್ನೂ ಸಿದ್ದರಾಮಯ್ಯ ( Siddaramaiah ) ಅವರ ನೇತೃತ್ವದಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಿ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಯನ್ನು ಎದರಿಸೋಣ. ಈ ರಾಜ್ಯಕ್ಕೆ ನ್ಯಾಯ ಒದಗಿಸಬೇಕಾದರೆ ಕಾಂಗ್ರೆಸ್ ಪಕ್ಷವನ್ನು ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೂರಿಸಬೇಕು. ಆ ನಿಟ್ಟಿನಲ್ಲಿ ಕೆಲಸ ಮಾಡಲು ನಾವೆಲ್ಲರೂ ಇಂದು ಸಂಕಲ್ಪ ಮಾಡೋಣ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ( KPCC President DK Shivakumar ) ಘೋಷಣೆ ಮಾಡಿದ್ದಾರೆ.
ಇಂದು ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದಂತ ಅವರು, ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ರಾಜ್ಯ ಹಾಗೂ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರೋಣ. ಸೋನಿಯಾ ಗಾಂಧಿ ಅವರ ಕೈ ಬಲಪಡಿಸಿ, ರಾಹುಲ್ ಗಾಂಧಿ ಅವರನ್ನು ಪ್ರಧಾನಿಯನ್ನಾಗಿ ಮಾಡೋಣ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಿ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಯನ್ನು ಎದರಿಸೋಣ. ಈ ರಾಜ್ಯಕ್ಕೆ ನ್ಯಾಯ ಒದಗಿಸಬೇಕಾದರೆ ಕಾಂಗ್ರೆಸ್ ಪಕ್ಷವನ್ನು ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೂರಿಸಬೇಕು. ಆ ನಿಟ್ಟಿನಲ್ಲಿ ಕೆಲಸ ಮಾಡಲು ನಾವೆಲ್ಲರೂ ಇಂದು ಸಂಕಲ್ಪ ಮಾಡೋಣ ಎಂದರು.
ಸಿದ್ದರಾಮಯ್ಯ ಅವರು ಕೇವಲ ಹಿಂದುಳಿದ ವರ್ಗಗಳ ನಾಯಕ ಎಂದು ಪರಿಗಣಿಸಬೇಡಿ. ಅವರು ಎಲ್ಲ ಧರ್ಮ ಹಾಗೂ ವರ್ಗಗಳ ನಾಯಕ. ರಾಜ್ಯದ ಜನರಿಗೆ ಇನ್ನಷ್ಟು ಸೇವೆ ಮಾಡುವ ಶಕ್ತಿ ಸಿದ್ದರಾಮಯ್ಯ ಅವರಿಗೆ ಸಿಗಲಿ ಎಂದು ಶುಭ ಹಾರೈಸುತ್ತೇನೆ. ರಾಜ್ಯದಲ್ಲಿ ಯುವಕರು, ರೈತರು, ಬಡವರಿಗೆ ನಿರಂತರವಾಗಿ ಅನ್ಯಾಯವಾಗುತ್ತಿದ್ದು, ಇದಕ್ಕೆ ಅಂತ್ಯವಾಡಿ ಅವರಿಗೆ ನ್ಯಾಯ ಒದಗಿಸಬೇಕು ಎಂದರೆ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯೋಣ. ಇಂದು ನಾವೆಲ್ಲರೂ ಆ ಪ್ರತಿಜ್ಞೆ ಮಾಡೋಣ ಎಂದು ಹೇಳಿದರು.