ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆ ( Karnataka Assembly Election 2023 ) ಸಮೀಪಿಸುತ್ತಿರುವಾಗಲೇ, ದಿನೇ ದಿನೇ ಎಎಪಿ ಪಕ್ಷವನ್ನು ಸೇರ್ಪಡೆಗೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ನಾಳೆ ಸ್ಯಾಂಡಲ್ ವುಡ್ ಹಾಸ್ಯ ಕಲಾವಿಧ ಟೆನ್ನಿಸ್ ಕೃಷ್ಣ ( Sandalwood Comedy Actor Tennis Krishna ) ಅವರು ಅಮ್ ಆದ್ಮಿ ಪಕ್ಷವನ್ನು ( Am Admi Party ) ಸೇರ್ಪಡೆಗೊಳ್ಳಲಿದ್ದಾರೆ.
ಈ ಕುರಿತಂತೆ ಎಎಪಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕನ್ನಡ ಚಲನಚಿತ್ರರಂಗದ ಹೆಸರಾಂತ ಹಾಸ್ಯ ಕಲಾವಿದ ಟೆನಿಸ್ ಕೃಷ್ಣ ರವರು ಆಮ್ ಆದ್ಮಿ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಪಕ್ಷದೊಂದಿಗೆ ಕೈ ಜೋಡಿಸುತ್ತಿರುವ ವಿಚಾರವನ್ನು ತಿಳಿಸಲು ಹರ್ಷಿಸುತ್ತೇವೆ.
ಈ ಸಂಬಂಧ ನಾಳೆ ಬೆಳಿಗ್ಗೆ 11 ಗಂಟೆಗೆ ನಗರದ ಖಾಸಗೀ ಹೋಟೆಲ್ ನಲ್ಲಿ ಎಎಪಿ ಪಕ್ಷಕ್ಕೆ ಅಧಿಕೃತವಾಗಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹಾಗೂ ಇನ್ನಿತರ ಹಿರಿಯ ಮುಖಂಡರ ಸಮ್ಮುಖದಲ್ಲಿ ಸೇರ್ಪಡೆ ಆಗುತ್ತಿದ್ದಾರೆ ಎಂದು ತಿಳಿಸಿದೆ.