ಶಿವಮೊಗ್ಗ : ಸಮಾಜ ಕಲ್ಯಾಣ ಇಲಾಖೆಯು 2022-23ನೇ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 6 ರಿಂದ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ಉಚಿತ ವಸತಿ, ಊಟ ಸಹಿತ ಶಿಕ್ಷಣ ಪಡೆಯಲು ಶಿವಮೊಗ್ಗ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳ ಮಕ್ಕಳಿಂದ ಮನವಿ ಪತ್ರ ಆಹ್ವಾನಿಸಿದೆ.
ಆಸಕ್ತ ಸಫಾಯಿ ಕರ್ಮಚಾರಿ ಮಕ್ಕಳು ಜಿಲ್ಲೆಯ ಯಾವುದಾದರೂ ಮೊರಾಜಿ ದೇಸಾಯಿ/ಕಿತ್ತೂರು ರಾಣಿ ಚನ್ನಮ್ಮ/ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾಗಾಂಧಿ/ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳನ್ನು ಸಂಪರ್ಕಿಸಿ, ಗುರುತಿನ ಚೀಟಿ ಮತ್ತು ದಾಖಲಾತಿ ಕೋರಿ ಮನವಿ ಪತ್ರವನ್ನು ದಿ: 05/08/2022 ರೊಳಗಾಗಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ತಾಲೂಕು ವಸತಿ ಶಾಲೆಗಳ ಪ್ರಾಂಶುಪಾಲರನ್ನು ಸಂಪರ್ಕೀಸುವುದು. ಶಿವಮೊಗ್ಗ -9964760766, ಭದ್ರಾವತಿ-9902207754, ತೀರ್ಥಹಳ್ಳಿ-9481078559, ಶಿಕಾರಿಪುರ-9742015586, ಸೊರಬ-9740934526, ಸಾಗರ-9480491668, ಹೊಸನಗರ-9620793267 ಗಳನ್ನು ಸಂಪರ್ಕಿಸುವುದು.