ಬೆಂಗಳೂರು : ಹೊರ ರಾಜ್ಯದ ಯಾತ್ರಾಸ್ಥಳಗಳಿಗೆ ರಾಜ್ಯದಿಂದ ತೆರಳುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಛತ್ರ ನಿರ್ಮಾಣ ಮಾಡಲು ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರು ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಿದ್ದಾರೆ. ರಾಜ್ಯದ ಯಾತ್ರಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸೌಕರ್ಯಗಳನ್ನು ಅಭಿವೃದ್ದಿಪಡಿಸಲಾಗುವುದು ಮಾನ್ಯ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಅ ಜೊಲ್ಲೆ ( Minister Shashikala Jolle ) ತಿಳಿಸಿದ್ದಾರೆ.
BREAKING NEWS: ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದಿಳಿದ ರಾಹುಲ್ ಗಾಂಧಿ, ನಾಳೆಯ ಸಿದ್ದರಾಮೋತ್ಸವದಲ್ಲಿ ಭಾಗಿ
ಈ ಬಗ್ಗೆ ಮಾಧ್ಯಮ ಪ್ರಕಟಣೆಯನ್ನು ನೀಡಿರುವ ಅವರು, ಸಿಎಂ ಬೊಮ್ಮಾಯಿ ನೇತೃತ್ವದ ಸರಕಾರ ರಾಜ್ಯದಲ್ಲಿನ ವಿವಿಧ ದೇವಸ್ಥಾನಗಳು, ಮಠಗಳು ಹಾಗೂ ಹೊರ ರಾಜ್ಯಗಳಲ್ಲಿರುವ ಕರ್ನಾಟಕ ಛತ್ರಗಳ ಅಭಿವೃದ್ದಿಗಾಗಿ ಕಳೆದ 10 ವರ್ಷಗಳಲ್ಲೇ ಅತಿ ಹೆಚ್ಚು ಅನುದಾನವನ್ನು ನೀಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಹೊರ ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಾ ಸ್ಥಳಗಳಲ್ಲಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಛತ್ರಗಳ ನಿರ್ಮಾಣ ಹಾಗೂ ಅಭಿವೃದ್ದಿಗೂ ವಿಶೇಷ ಆದ್ಯತೆಯನ್ನು ನೀಡಿದ್ದಾರೆ.
BIG BREAKING NEWS: ಅಕ್ರಮ ಹಣ ವರ್ಗಾವಣೆ ಪ್ರಕರಣ: ನ್ಯಾಷನಲ್ ಹೆರಾಲ್ಡ್ ಕಚೇರಿಗೆ ಇ.ಡಿ ಯಿಂದ ಬೀಗ
ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಬರಿಮಲೆ, ಮಂತ್ರಾಲಯ ಹಾಗೂ ಪಂಡರಾಪುರದ ಕರ್ನಾಟಕ ಛತ್ರಗಳ ನಿರ್ಮಾಣ ಮತ್ತು ಅಭಿವೃದ್ದಿಗೆ ವಿಶೇಷ ಅನುದಾನವನ್ನು ಬಿಡುಗಡೆ ಮಾಡಲು ಆರ್ಥಿಕ ಇಲಾಖೆಗೆ ಸೂಚನೆ ನೀಡಿದ್ದರು. ಈ ಸಂಬಂಧ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಅತಿಹೆಚ್ಚು ಅನುದಾನ ನೀಡುವ ಮೂಲಕ ಇಲಾಖೆಯ ಅಭಿವೃದ್ದಿಗೆ ಹೆಚ್ಚಿನ ಸಹಕಾರ ನೀಡುತ್ತಿರುವುದಕ್ಕೆ ನಾನು ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.
BIGG NEWS: ಸ್ಯಾನಿಟರಿ ಪ್ಯಾಡ್ ಮೇಲೆ ಭಗವಾನ್ ಕೃಷ್ಣ ” ‘ಮಸೂಮ್ ಸಾವಾಲ್’ ಪೋಸ್ಟರ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ
ತಿರುಮಲದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ 232 ಕೋಟಿ ರೂಪಾಯಿಗಳ ಬೃಹತ್ ಅನುದಾನವನ್ನು ಕಳೆದ ವರ್ಷ ನೀಡಲಾಗಿತ್ತು. ಕರ್ನಾಟಕ ಭವನದ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಆಂಧ್ರಪದ್ರೆಶದ ಶ್ರೀಶೈಲದಲ್ಲಿರುವ ನೂತನ ಕರ್ನಾಟಕ ಛತ್ರದ ನಿರ್ಮಾಣಕ್ಕಾಗಿ 85 ಕೋಟಿ ರೂಪಾಯಿಗಳ ಅನುದಾನವನ್ನು ಮುಖ್ಯಮಂತ್ರಿಗಳ ಈಗಾಗಲೇ ಮಂಜೂರು ಮಾಡಿದ್ದು, ಸದ್ಯದಲ್ಲಿಯೇ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ.