ಬೆಂಗಳೂರು: ನೈತಿಕ ಪಾಠದ ಅಡಿಯಲ್ಲಿ ಭಗವದ್ಗೀತೆ ಪಠ್ಯ ಜಾರಿಗೆ ತರಲು ಶಿಕ್ಷಣ ಇಲಾಖೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆಗೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎನ್ನಲಾಗಿದೆ.
ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಭಗವದ್ಗೀತೆಯನ್ನು ಎಲ್ಲಾ ಶಾಲೆಗಳಲ್ಲಿ ವಾರದಲ್ಲಿ ಒಂದು ದಿನ ಮಕ್ಕಳಿಗೆ ಪಾಠ ಮಾಡಲಾಗುತ್ತದೆ ಎನ್ನಲಾಗಿದೆ. ಈಗಾಗಲೇ ಗುಜರಾತ್ ನಲ್ಲಿ 6 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಭಗವದ್ಗೀತೆಯ ಭೋಧನೆಯ ಕಾರ್ಯ ನಡೆಯುತ್ತಿದ್ದು, ಅಲ್ಲಿನ ಹಾಗೇ ಇಲ್ಲಿ ಕೂಡ ಭೋದನೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈಗಾಗಲೇ ಮೊಟ್ಟೆ, ಬಾಳೆ ಹಣ್ಣು, ಹಿಜಾಬ್ ವಿವಾದಲ್ಲಿ ರಾಜ್ಯದ ಶಿಕ್ಷಣ ಇಲಾಖೆಯುವ ವಿವಾದದಲ್ಲಿ ಇದ್ದು ಮುಂದೆ ಭಗವದ್ಗೀತೆಯ ಭೋಧನೆಯ ಕಾರ್ಯ ಯಾವ ವಿವಾದಕ್ಕೆ ತಿರುಗಲಿದೆ ಎನ್ನುವುದನ್ನು ಕಾದು ನೋಡಬೇಕಾಗಿದೆ.