ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಸುಳ್ಯ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.
BIGG NEWS : ರಾಜ್ಯದಲ್ಲಿ ಮಳೆಯಿಂದ 14,575 ಮನೆಗಳಿಗೆ ಹಾನಿ : ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮಳೆ ಮುಂದುವರೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಇಂದು ಮುಂಜಾಗ್ರತ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರುಉ ಆದೇಶ ಹೊರಡಿಸಿದ್ದಾರೆ.
ಕಡಬ ತಾಲೂಕಿನಲ್ಲೂ ಪರಿಸ್ಥಿತಿ ಅವಲೋಕಿಸಿ ಶಾಲೆಗಳಿಗೆ ರಜೆ ನೀಡುವಂತೆ ಕಡಬ ತಹಶೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಸೂಚನೆ ನೀಡಿದ್ದಾರೆ.