ಬೆಂಗಳೂರು: ರಾಜ್ಯ ವಿಧಾನಪರಿಷತ್ತಿಗೆ ಸಿ.ಎಂ ಇಬ್ರಾಹಿಂ ರಾಜೀನಾಮೆ ಬಳಿಕ, ಒಂದು ಸ್ಥಾನ ತೆರವಾಗಿತ್ತು. ಆ ಸ್ಥಾನಕ್ಕೆ ಬಿಜೆಪಿಯಿಂದ ಬಾಬೂರಾವ್ ಚಿಂಚನಸೂರ್ ಅವರನ್ನು ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಲಾಗಿತ್ತು. ಅವರ ವಿರುದ್ಧ ಯಾವುದೇ ಪಕ್ಷದಿಂದ ಅಭ್ಯರ್ಥಿ ಹಾಕದ ಹಿನ್ನಲೆಯಲ್ಲಿ ಅವಿರೋಧವಾಗಿ ಬಾಬೂರಾವ್ ಚಿಂಚನಸೂರ್ ಆಯ್ಕೆಯಾಗಿದ್ದಾರೆ.
ಈ ಕುರಿತಂತೆ ಸಹಾಯಕ ಚುನಾವಣಾಧಿಕಾರಿ ಹಾಗೂ ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
BREAKING NEWS: ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಂಜಯ್ ರಾವತ್ ಪತ್ನಿ ವರ್ಷಾ ರಾವತ್ ಗೆ ಇಡಿ ಸಮನ್ಸ್
ಅಂದಹಾಗೇ ಕೇಂದ್ರ ಚುನಾವಣಾ ಆಯೋಗದಿಂದ ವಿಧಾನಪರಿಷತ್ ಉಪ ಚುನಾವಣೆಗೆ ಅಧಿಸೂಚನೆ ಹೊರಡಿಸಿತ್ತು. ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಅವರು ಮಾರ್ಚ್ 31, 2022ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ಅವಧಿ ಜೂನ್ 17, 2024ರವರೆಗೆ ಇತ್ತು ಎಂದು ತಿಳಿಸಿತ್ತು.
ಸಿ.ಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿರುವಂತ ಸ್ಥಾನಕ್ಕೆ ಚುನಾವಣೆಗೆ ದಿನಾಂಕ ನಿಗದಿ ಪಡಿಸಲಾಗಿತ್ತು. ಜುಲೈ. 25ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ದಿನಾಂಕ 01-08-2022 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
ನಾಮಪತ್ರಗಳ ಪರಿಶೀಲನೆ ದಿನಾಂಕ 02-08-2022ರಂದು ನಡೆಸಲಾಗಿತ್ತು. ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನ ದಿನಾಂಕ 04-08-2022 ಆಗಿತ್ತು. ದಿನಾಂಕ 11-08-2022ರಂದು ಮತದಾನ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ನಡೆಸಲು ನಿಗದಿ ಪಡಿಸಲಾಗಿತ್ತು.
ಆದ್ರೇ ದಿನಾಂಕ 01-08-2022ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನದವರೆಗೆ ಬಿಜೆಪಿಯ ಬಾಬೂರಾವ್ ಚಿಂಚನಸೂರು ಹೊರತಾಗಿ ಬೇರೆ ಯಾವುದೇ ಅಭ್ಯರ್ಥಿ ನಾಮಪತ್ರ ಸಲ್ಲಿಸಿರದ ಕಾರಣ, ಇಂದು ಅಧಿಕೃತವಾಗಿ ಅವರು ಅವಿರೋಧವಾಗಿ ಆಯ್ಕೆಯಾಗಿರೋದಾಗಿ ಘೋಷಣೆ ಮಾಡಲಾಗಿದೆ.