ಬೆಂಗಳೂರು: ರಾಜ್ಯಾಧ್ಯಂತ ಮುಂದಿನ 3 ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ. ಮಳೆಯಿಂದ ( Rain ) ಉಂಟಾಗಬಹುದಾದಂತ ಹಾನಿಯ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ 20 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಈ ಸಂಬಂಧ ಮಾಹಿತಿ ಬಿಡುಗಡೆ ಮಾಡಿರುವಂತ ಹವಾಮಾನ ಇಲಾಖೆಯು ರಾಜ್ಯಾಧ್ಯಂತ ಮುಂದಿನ 3 ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ ( Heavy Rain ). ಗಾಳಿ, ಗುಡುಗು, ಮಿಂಚು, ಸಿಡಿಲು ಸಹಿತ ಮಳೆಯಾಗಲಿದೆ. 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂಬುದಾಗಿ ತಿಳಿಸಿದೆ.
BIGG NEWS: ಮಂಡ್ಯದಲ್ಲಿ ಭಾರಿ ಮಳೆ: ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಹ ಭೀತಿ; ಪ್ರವಾಸಿಗರಿಗೆ ನಿಷೇಧ
ಭಾರಿ ಮಳೆಯಿಂದಾಗಿ ಮುಂದಾಗಲಿರುವಂತ ಅನಾಹುತಗಳ ಬಗ್ಗೆ ಮುಂಜಾಗ್ರತಾ ಕ್ರಮವನ್ನು 20 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ವಹಿಸುವಂತೆ ಸೂಚನೆ ನೀಡಲಾಗಿದೆ.
ಇನ್ನೂ ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮಂಡ್ಯ, ಮೈಸೂರು, ಕೊಡಗು, ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ರಾಯಚೂರು, ಕಲಬುರ್ಗಿ, ಬೀದರ್ ಹಾಗೂ ಕೊಪ್ಪಳ ಜಿಲ್ಲೆಯ ಡಿಸಿಗಳಿಗೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದೆ.