ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಪ್ರಶ್ನಿಸುತ್ತಿದೆ ಎಂದು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಗುರುವಾರ ಟ್ವೀಟ್ ಮಾಡಿದ್ದಾರೆ.
Mallikarjun Kharge, Leader of the Opposition in the Rajya Sabha, has been undergoing interrogation by the ED for the last four and a half hours. His ordeal is continuing. The entire Congress party stands with him in solidarity.
— Jairam Ramesh (@Jairam_Ramesh) August 4, 2022
“ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನ ಕಳೆದ ನಾಲ್ಕೂವರೆ ಗಂಟೆಗಳಿಂದ ಇಡಿ ವಿಚಾರಣೆ ನಡೆಸುತ್ತಿದೆ. ಅವ್ರ ಅಗ್ನಿಪರೀಕ್ಷೆ ಮುಂದುವರಿಯುತ್ತಿದೆ. ಇಡೀ ಕಾಂಗ್ರೆಸ್ ಪಕ್ಷವು ಒಗ್ಗಟ್ಟಿನಿಂದ ಅವರೊಂದಿಗೆ ನಿಲ್ಲುತ್ತದೆ” ಎಂದು ಹೇಳಿದರು.