ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ರಾತ್ರಿಯ ವೇಳೆಯಲ್ಲಿ ಅಪರಾಧ ಚಟುವಟಿಕೆ ತಡೆಗಟ್ಟುವ ನಿಟ್ಟಿನಲ್ಲಿ ಬೈಕ್ ಹಿಂಬದಿಯ ಸಾವರರಿಗೆ ಪ್ರಯಾಣ ನಿರ್ಬಂಧ ವಿಧಿಸಿ ಆದೇಶಿಸಲಾಗಿತ್ತು ಪೊಲೀಸ್ ಇಲಾಖೆ ಆದೇಶಿಸಿತ್ತು. ಈ ಆದೇಶಕ್ಕೆ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದರು. ಇದೀಗ ಸಾರ್ವಜನಿಕರ ಒತ್ತಡಕ್ಕೆ ಮಣಿದು, ಈ ಆದೇಶವನ್ನು ವಾಪಾಸ್ ಪಡೆದಿದೆ.
Rain Alert: ರಾಜ್ಯಾಧ್ಯಂತ ಮುಂದಿನ 3 ಗಂಟೆ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ
ಈ ಸಂಬಂಧ ಜಿಲ್ಲಾ ಪೊಲೀಸ್ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, ರಾತ್ರಿಯ ವೇಳೆಯಲ್ಲಿ ಬೈಕ್ ನಲ್ಲಿ ಹಿಂಬದಿಯ ಸವಾರರ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿತ್ತು. ಇಂತಹ ಆದೇಶವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವಾಪಾಸ್ ಪಡೆಯಲಾಗಿದೆ ಎಂದು ತಿಳಿಸಿದೆ.
BREAKING NEWS: ರಾಜ್ಯದಲ್ಲಿ ಜೂ.1ರಿಂದ ಆ.4ರವರೆಗೆ ಮಳೆಯಿಂದ 64 ಜನರು ಸಾವು – ಸಚಿವ ಆರ್ ಅಶೋಕ್
ಅಂದಹಾಗೇ ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಇಂದು ರಾತ್ರಿಯಿಂದಲೇ ಜಾರಿಗೆ ಬರುವಂತೆ ಸಂಜೆ 6 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಬೈಕ್ ನ ಹಿಂಬದಿಯ ಸವಾರರಿಗೆ ನಿರ್ಬಂಧ ವಿಧಿಸಿ ಆದೇಶಿಸಲಾಗಿತ್ತು. ಈ ಆದೇಶಕ್ಕೆ ತೀವ್ರ ವಿರೋಧದ ಹಿನ್ನಲೆಯಲ್ಲಿ ಇದೀಗ ದ್ವಿಚಕ್ರ ವಾಹನಗಳ ಹಿಂಬದಿಯ ಸವಾರರ ಸಂಚಾರ ನಿರ್ಬಂಧದ ಆದೇಶವನ್ನು ಪೊಲೀಸ್ ಇಲಾಖೆ ವಾಪಾಸ್ ಪಡೆದಿದೆ.