ಬೆಂಗಳೂರು: ಶ್ರೀಸಾಮಾನ್ಯನೂ ಸಹ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಪಡೆಯಲು ಅನುಕೂಲವಾಗುವಂತೆ ಕಸಾಪದಿಂದ ಸದಸ್ಯತ್ವ ಶುಲ್ಕವನ್ನು 500 ರೂ ನಿಂದ 250ಕ್ಕೆ ಇಳಿಕೆ ಮಾಡಿದೆ. ಈ ಮೂಲಕ ಕನ್ನಡ ಸಾಹಿತ್ಯ ಪ್ರೇಮಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ.
‘ಕನ್ನಡ ಸಾಹಿತ್ಯ ಪರಿಷತ್ತಿ’ಗೊಂದು ಹೊಸ ರೂಪ: ಸಿಎಂ ಬೊಮ್ಮಾಯಿಂದ ನೂತನ ‘ಮೊಬೈಲ್ ಆ್ಯಪ್’ ಬಿಡುಗಡೆ
ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗ್ರಹಕಚೇರಿ ಕೃಷ್ಣಾದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದ ಮೊಬೈಲ್ ಅಪ್ಲಿಕೇನ್ನನ್ನು ಲೋಕಾರ್ಪಣೆ ಮಾಡಿದರು. ಈ ವೇಳೆ ಮಾತನಾಡಿದಂತ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಮಾತನಾಡಿ “ಕನ್ನಡ ಸಾಹಿತ್ಯ ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿಸುವ” ನಿಟ್ಟಿನಲ್ಲಿ ಪರಿಷತ್ತನ್ನು ಮುನ್ನಡೆಸಲಾಗುತ್ತಿದೆ. ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದ ಇವುಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿಯ ಮೂಲ ಧ್ಯೇಯೋದ್ದೇಶಗಳೊಂದಿಗೆ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆ ಕಾಪಾಡುವ ಹಾಗೂ ಅಭಿವೃದ್ಧಿ ಪಡಿಸುವ ಜವಾಬ್ದಾರಿಯನ್ನು ಹೊತ್ತು, ಪರಿಷತ್ತಿನ ನಿಯಮ-ನಿಬಂಧನೆಗಳಿಗೆ ಅಮೂಲಾಗ್ರ ಬದಲಾವಣೆ ತರುವ ಮೂಲಕ ಕ್ರಾಂತಿಕಾರಿ ಹೆಜ್ಜೆಯನ್ನು ಇರಿಸಲಾಗಿದೆ ಎಂದರು.
BIG BREAKING NEWS: ಪುಲ್ವಾಮಾದಲ್ಲಿ ಭಯೋತ್ಪಾದಕರಿಂದ ಗ್ರೆನೇಡ್ ದಾಳಿ: ಓರ್ವ ವಲಸೆ ಕಾರ್ಮಿಕ ಸಾವು, ಇಬ್ಬರಿಗೆ ಗಾಯ
ವಿಶ್ವದ್ಯಾಂತ ಕನ್ನಡವನ್ನು ಒಗ್ಗೂಡಿಸಲು ಹೊರರಾಜ್ಯ, ಕೇಂದ್ರಾಡಳಿತ ಪ್ರದೇಶ ಮತ್ತು ಹೊರದೇಶ ಘಟಕಗಳನ್ನು ಸ್ಥಾಪಿಸುವ ದೃಷ್ಟಿಯಿಂದಲೂ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಪರಿಷತ್ತಿಗೆ ಪ್ರಸ್ತುತ ಮುಂದಿನ ಐದು ವರ್ಷಗಳ ಈ ಅವಧಿಯಲ್ಲಿ ಒಂದು ಕೋಟಿ ಸದಸ್ಯತ್ವವನ್ನು ಹೊಂದುವ ದೃಷ್ಟಿಯಿಂದ ಶ್ರೀಸಾಮಾನ್ಯನೂ ಸಹ ಸದಸ್ಯತ್ವ ಪಡೆಯಲು ಅನುಕೂಲವಾಗುವಂತೆ 500 ರೂ ಗಳಿದ್ದ ಸದಸ್ಯತ್ವ ಶುಲ್ಕವನ್ನು 250 ರೂ ಗಳಿಗೆ ಇಳಿಸಲಾಗಿದೆ. ಇನ್ನು ಮುಂದೆ https://play.google.com/store/apps/details?id=com.knobly.kasapa ವಿಳಾಸದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಪ್ಲಿಕೇನ್ನ ಸಾರ್ವಜನಿಕರಿಗೆ ಸಿಗಲಿದೆ ಎಂದರು.