ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
BIGG NEWS : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ‘ವೇತನ, ಭತ್ಯೆ ಹೆಚ್ಚಿಸಿ’ ರಾಜ್ಯ ಸರ್ಕಾರ ಆದೇಶ
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದುಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಹಾಸನ, ಬೆಳಗಾವಿ, ಗದಗ, ಧಾರವಾಡ, ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಮೈಸೂರು ತುಮಕೂರು, ದಾವಣಗೆರೆ, ಬಳ್ಳಾರಿ, ಹಾವೇರಿ, ಬಾಗಲಕೋಟೆ, ವಿಜಯಪುರ, ಬೀದರ್ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಎರಡು ದಿನ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಇಂದು ಮತ್ತು ಆಗಸ್ಟ್ 6 ರಂದು ಎರಡು ದಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಂಡ್ಯದಲ್ಲಿ ಇಂದು ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.