ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 5 ಸಾವಿರ ಪೊಲೀಸ್ ಕಾನ್ ಸ್ಟೇಬಲ್ ಹಾಗೂ 450 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ.
Rain in Karnataka : ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಶೀಘ್ರದಲ್ಲೇ 5,000 ಪೊಲೀಸ್ ಕಾನ್ ಸ್ಟೇಬಲ್ ಹಾಗೂ 450 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
BIGG NEWS : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ‘ವೇತನ, ಭತ್ಯೆ ಹೆಚ್ಚಿಸಿ’ ರಾಜ್ಯ ಸರ್ಕಾರ ಆದೇಶ
ಇನ್ನು ಪಿಎಸ್ ಐ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ 545 ಹುದ್ದೆಗಳಿಗೆ ತನಿಖೆ ಮುಗಿದ ನಂತರ ಮರು ಪರೀಕ್ಷೆ ದಿನಾಂಕ ಪ್ರಕಟಿಸಲಾಗುವುದು. ವಯೋಮಿತಿ ಸಡಿಲಿಕೆ ನೀಡಲಾಗುವುದು. ಅಕ್ರಮದಲ್ಲಿ ಭಾಗಿಯಾದವರಿಗೆ ಮರುಪರೀಕ್ಷೆಯಲ್ಲಿ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.