ಬೆಂಗಳೂರು: ನಾಲ್ಕು ಸಾರಿಗೆ ಸಂಸ್ಥೆಗಳಿಗೆ ಭವಿಷ್ಯ ನಿಧಿ ಬಾಕಿ ಪಾವತಿ ಹಾಗೂ ಇಂಧನ ವೆಚ್ಚಕ್ಕಾಗಿ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿ ಆದೇಶಿಸಿದೆ. ಈ ಮೂಲಕ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದೆ.
ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳ್ನು ಹೊರಡಿಸಿದ್ದು, ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಿಗೆ ಭವಿಷ್ಯ ನಿಧಿ ಬಾಕಿ ಪಾವತಿಗಾಗಿ ಒಂದು ಬಾರಿಯ ಸಹಾಯವಾಗಿ ರೂ.80,000 ಲಕ್ಷಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
BIG NEWS: ‘ಜೆಡಿಎಸ್’ನ ಮತ್ತೊಂದು ವಿಕೆಟ್ ಪತನ: ಅಗಿಲೆ ಯೋಗೀಶ್ ಎಎಪಿ ಸೇರ್ಪಡೆ
ಇನ್ನೂ ಇಂಧನ ವೆಚ್ಚಕ್ಕಾಗಿ ರೂ.25,927.22 ಲಕ್ಷಗಳು ಸೇರಿದಂತೆ ಒಟ್ಟು ರೂ.1,05,927.22 ಲಕ್ಷಗಳನ್ನು ನಾಲ್ಕು ಸಾರಿಗೆ ಸಂಸ್ಥೆಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ಆದೇಶದಲ್ಲಿ ಹೇಳಿದ್ದಾರೆ.
ಅಂದಹಾಗೇ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಭವಿಷ್ಯ ನಿಧಿಗೆ ರೂ.20,000 ಲಕ್ಷ, ಬಿಎಂಟಿಸಿಗೆ ರೂ.25,000 ಲಕ್ಷ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರರಿಗೆ ರೂ.25,000 ಲಕ್ಷ ಹಾಗೂ ಕಲ್ಯಾಣ ಕರ್ನಾಟಕ ನಿಗಮದ ನೌಕರರಿಗೆ ರೂ.10,000 ಲಕ್ಷವನ್ನು ಸೇರಿದಂತೆ 80,000 ಲಕ್ಷಗಳನ್ನು ರಾಜ್ಯ ಸರ್ಕಾರ ಅನುದಾನವನ್ನು ಬಿಡುಗಡೆ ಮಾಡಿದೆ.