ಬೆಂಗಳೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಬಸವರಾಜ ಬೊಮ್ಮಾಯಿ ಇಂದು ದೆಹಲಿಗೆ ತೆರಳಲಿದ್ದಾರೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವ ಮತ್ತು ನೀತಿ ಆಯೋಗದ ಸಭೆಗಳಲ್ಲಿ ಪಾಲ್ಗೊಳ್ಳಲು ಇಂದು ಸಿಎಂ ಬಸವರಾಜ ಬೊಮ್ಮಾಐಇ ದೆಹಲಿಗೆ ತೆರಳಲಿದ್ದಾರೆ. ಇಂದು ಬೆಳಗ್ಗೆ 11.30 ಕ್ಕೆ ಪ್ರಯಾಣ ಬೆಳಸಲಿರುವ ಸಿಎಂ ಬೊಮ್ಮಾಐಇ, ಮಧ್ಯಾಹ್ನ 2.30 ಕ್ಕೆ ದೆಹಲಿ ತಲುಪಲಿದ್ದಾರೆ.
Rain In Karnataka : ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ-ಆರೆಂಜ್ ಅಲರ್ಟ್’ ಘೋಷಣೆ
ಇಂದು ಸಂಜೆ 4.30 ಕ್ಕೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸ್ವಾತಂತ್ರ್ಯ ಅಮೃತ ಮಹೋತ್ಸವದ ರಾಷ್ಟ್ರೀಯ ಸಮಿತಿಯ 3ನೇ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಾಳೆ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆಯಲಿಯರುವ ನೀತಿ ಆಯೋಗದ ಸಭೆಯಲ್ಲಿ ಭಾಗಿಯಾಗಲಿದ್ದು, ತಡರಾತ್ರಿ ಬೆಂಗಳೂರಿಗೆ ವಾಪಾಸ್ ಆಗಲಿದ್ದಾರೆ.