ನವದೆಹಲಿ : ಕೇಂದ್ರ ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ನೀಡಿದ್ದು, ಭಾರತೀಯ ರೈಲ್ವೆ 1.4 ಲಕ್ಷ ಉದ್ಯೋಗಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದರು. ಇನ್ನು ಅದಕ್ಕೆ ಸಂಬಂಧಿಸಿದ ಪ್ರಕ್ರಿಯೆ ಆರಂಭವಾಗಿದೆ ಎಂದರು.
ರಾಜ್ಯಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, “2014 ಮತ್ತು 2022ರ ನಡುವೆ ಭಾರತೀಯ ರೈಲ್ವೆಯಲ್ಲಿ 3,50,204 ಮಂದಿಗೆ ಉದ್ಯೋಗ ದೊರೆತಿದೆ. ಕೆಲವು ತಿಂಗಳ ಹಿಂದೆ ಒಂದೂವರೆ ವರ್ಷದಲ್ಲಿ 10 ಲಕ್ಷ ಉದ್ಯೋಗಗಳನ್ನ ಭರ್ತಿ ಮಾಡಬೇಕಿತ್ತು. ಪ್ರಧಾನಿ ಮೋದಿ ಆದೇಶ ಹೊರಡಿಸಿದ್ದಾರೆ. ಇದರ ಭಾಗವಾಗಿ 1.4 ಲಕ್ಷ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುವುದು ಎಂದು ಹೇಳಿದರು. ಇನ್ನು “ಈ ವರ್ಷವೇ 18,000 ಮಂದಿಗೆ ರೈಲ್ವೆಯಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗಿದ್ದು, ರೈಲ್ವೆ ಒಂದು ದೊಡ್ಡ ಉದ್ಯಮವಾಗಿದೆ. ನಿವೃತ್ತಿ, ರಾಜೀನಾಮೆ, ಸಾವುಗಳಿಂದಾಗಿ ದೊಡ್ಡ ದೊಡ್ಡ ಹುದ್ದೆಗಳು ಖಾಲಿ ಇರುತ್ತವೆ. ಅವರನ್ನ ಬದಲಾಯಿಸುವ ಪ್ರಕ್ರಿಯೆ ನಿರಂತರವಾಗಿ ಮುಂದುವರಿಯಲಿದೆ” ಎಂದು ಹೇಳಿದರು.
ಇದೇ ವೇಳೆ ಭಾರತೀಯ ರೈಲ್ವೆ ಮಹತ್ವದ ನಿರ್ಧಾರ ಕೈಗೊಂಡೊದ್ದು, ರೈಲ್ವೆ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಮಹಿಳಾ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಹಾಜರಾದ ನಂತ್ರ ಅರ್ಜಿ ಶುಲ್ಕವನ್ನ ಮರುಪಾವತಿಸಲಾಗುವುದು ಎಂದು ಘೋಷಿಸಲಾಗಿದೆ. ವಿವಿಧ ಇಲಾಖೆಗಳಲ್ಲಿ ಅಸ್ತಿತ್ವದಲ್ಲಿರುವ ಲಿಂಗ ಅಂತರವನ್ನ ಕಡಿಮೆ ಮಾಡಲು ಮತ್ತು ರೈಲ್ವೆ ಸೇವೆಗಳಿಗೆ ಮಹಿಳೆಯರ ಪ್ರವೇಶವನ್ನ ಸುಲಭಗೊಳಿಸುವ ಉದ್ದೇಶದಿಂದ ಭಾರತೀಯ ರೈಲ್ವೆ ಈ ಕ್ರಮಗಳನ್ನ ಕೈಗೊಳ್ಳಲಾಗಿದೆ. ಪ್ರಸ್ತುತ, ಭಾರತೀಯ ರೈಲ್ವೆವಿವಿಧ ವಲಯಗಳಲ್ಲಿನ ಒಟ್ಟು ಉದ್ಯೋಗದಲ್ಲಿ ಮಹಿಳೆಯರ ಭಾಗವಹಿಸುವಿಕೆ ಕೇವಲ 7.87% ಎಂದು ಅಂದಾಜಿಸಲಾಗಿದೆ.
ರೈಲ್ವೆಯ ಇತರ ಇಲಾಖೆಗಳಿಗೆ ಹೋಲಿಸಿದರೆ ಕಳೆದ ಕೆಲವು ವರ್ಷಗಳಿಂದ ರೈಲ್ವೆ ಸಂರಕ್ಷಣಾ ಪಡೆ (RPF) ನಲ್ಲಿ ಮಹಿಳಾ ಸಿಬ್ಬಂದಿಗಳ ಸಂಖ್ಯೆ ಸ್ವಲ್ಪ ತಗ್ಗಿದೆ. ಆದರೆ ರೈಲ್ವೆಯಲ್ಲಿ ಮಹಿಳಾ ಉದ್ಯೋಗಿಗಳ ಪ್ರಾತಿನಿಧ್ಯವನ್ನ ಹೆಚ್ಚಿಸಲು ಹೆಚ್ಚಿನ ಕ್ರಮಗಳನ್ನ ತೆಗೆದುಕೊಳ್ಳಬೇಕಾಗಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಆಗಸ್ಟ್ 3 ರಂದು ಲೋಕಸಭೆಯಲ್ಲಿ ಲಿಖಿತ ರೂಪದಲ್ಲಿ ಮಂಡಿಸಿದ ವಿವರಗಳ ಪ್ರಕಾರ, ರೈಲ್ವೆಯ ವಿವಿಧ ಇಲಾಖೆಗಳಲ್ಲಿ 12,52,347 ಉದ್ಯೋಗಿಗಳ ಪೈಕಿ ಕೇವಲ 98,540 ಮಹಿಳಾ ಉದ್ಯೋಗಿಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಮಾರ್ಚ್ 2021ರ ಹೊತ್ತಿಗೆ, ಭಾರತೀಯ ರೈಲ್ವೆಒಟ್ಟು ಉದ್ಯೋಗಿಗಳ ಸಂಖ್ಯೆ 12,52,347, ಅದರಲ್ಲಿ ಮಹಿಳಾ ಉದ್ಯೋಗಿಗಳ ಸಂಖ್ಯೆ 98,540 ಆಗಿದೆ. ರೈಲ್ವೆ ಉದ್ಯೋಗಗಳಲ್ಲಿ ಮಹಿಳೆಯರ ಒಟ್ಟು ಭಾಗವಹಿಸುವಿಕೆ ಕೇವಲ 7.87 ಪ್ರತಿಶತ ಎಂದು ಕೇಂದ್ರ ಸಚಿವರು ಸಂಸತ್ತಿಗೆ ತಿಳಿಸಿದರು.