ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಮಹಿಳೆಯರಿಗಾಗಿ ಶೀಘ್ರವೇ ವಿಶೇಷ ಕ್ಲಿನಿಕ್ ಆರಂಭಿಸುವ ಯೋಜನೆ ಇದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
BIGG NEWS : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ
ಚಿಕ್ಕಬಳ್ಳಾಪುರ ಜಿಲ್ಎಯ ಜಡಬಂಡಹಳ್ಳಿ ಗ್ರಾಮದಲ್ಲಿ ಸ್ತ್ರೀಶಕ್ತಿ ಸಂಘಗಳ ಸದಸ್ಯರಿಗೆ ಸಾಲದ ಚೆಕ್ ವಿತರಿಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಮಹಿಳೆಯರಿಗಾಗಿ ವಿಶೇಷ ಕ್ಲಿನಿಕ್ ಆರಂಭಿಸುವ ಯೋಜನೆ ಇದ್ದು, ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರತಿ ಕ್ಷೇತ್ರದಲ್ಲೂ ಮಹಿಳೆಯರಿಗೆ ಆದ್ಯತೆ ನೀಡುವುದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಗುರಿಯಾಗಿದೆ. ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಮಾಡಿಸಬೇಕು ಎಂದು ಹೇಳಿದ್ದಾರೆ.