ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022 ರ ಮೊದಲ ಕಾರ್ಯಕ್ರಮ ಗಜಪಯಣಕ್ಕೆ ಇಂದು ಸಚಿವ ಎಸ್.ಟಿ. ಸೋಮಶೇಖರ್ ಚಾಲನೆ ನೀಡಿದ್ದಾರೆ.
ಕ್ಯೂಬಾ: ಸಿಡಿಲು ಬಡಿತಕ್ಕೆ ಹೊತ್ತಿಯುರಿದ ತೈಲ ಸಂಗ್ರಹಣಾ ಘಟಕ: 121 ಮಂದಿಗೆ ಗಾಯ, 17 ಜನ ನಾಪತ್ತೆ
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಅರಣ್ಯ ಪ್ರದೇಶದ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ಗಜಪಯಣ ಕಾರ್ಯಕ್ರಮಕ್ಕೆ ಸಚಿವ ಎಸ್.ಟಿ. ಸೋಮಶೇಖರ್ ಚಾಲನೆ ನೀಡಿದ್ದಾರೆ. ಮೊದಲ ಹಂತದಲ್ಲಿ 9 ಆನೆಗಳು ಮೈಸೂರಿಗೆ ಪಯಣ ಬೆಳಸಲಿವೆ. ಅಭಿಮನ್ಯು ನೇತೃತ್ವದಲ್ಲಿ ಮಹೇಂದ್ರ, ಗೋಪಾಲಸ್ವಾಮಿ, ಅರ್ಜುನ, ಭೀಮ, ಧನಂಜಯ, ಕಾವೇರಿ, ಚೈತ್ರಾ, ಲಕ್ಷ್ಮೀ ಆನೆಗಳು ಮೈಸೂರಿಗೆ ಪ್ರಯಾಣ ಬೆಳಸಲಿವೆ.
ಗಜಪಡೆಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಕೆ ನಂತರ ಲಾರಿಗಳ ಮೂಲಕ ಅಭಿಮನ್ಯು ನೇತೃತ್ವದ ಆನೆಗಳ ತಂಡ ಮೈಸೂರಿಗೆ ಆನೆಗಳು ಆಗಮಿಸಲಿವೆ. ಈ ಭಾರಿ 14 ಆನೆಗಳು ಮೈಸೂರು ದಸರೆಯಲ್ಲಿ ಭಾಗವಹಿಸಲಿವೆ. ಈ ಭಾರಿ ಅದ್ದೂರಿ ಹಾಗೂ ಸಾಂಪ್ರದಾಯಿಕ ದಸರೆಗೆ ಸರ್ಕಾರ ಸಿದ್ದತೆ ನಡೆಸಿದೆ.
ಇಂದು 07-08-22 ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಗ್ರಾಮದಲ್ಲಿ ಬೆಳಗ್ಗೆ 9.01 ರಿಂದ 9.35ರ ಕನ್ಯಾ ಲಗ್ನದಲ್ಲಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವುದರ ಮೂಲಕ ನಾಡಹಬ್ಬ ಮೈಸೂರು ದಸರಾ 2022ಕ್ಕೆ ಮುನ್ನುಡಿ ಬರೆಯುವ ಗಜಪಯಣಕ್ಕೆ ಅರಣ್ಯ ಸಚಿವರಾದ ಉಮೇಶ್ ಕತ್ತಿ ಅವರೊಂದಿಗೆ ಚಾಲನೆ ನೀಡಲಾಯಿತು.@CMofKarnataka @BSBommai pic.twitter.com/JxCP1SoSat
— S T Somashekar Gowda (@STSomashekarMLA) August 7, 2022