ಬೆಳಗಾವಿ: ಮಳೆಯಿಂದಾಗಿ ಸರಿಯಾಗಿ ದಾರಿ ಕಾಣದೇ ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಡಿವೈಡರ್ ಗೆ ಡಿಕ್ಕಿಯಾಗಿದೆ. ಈ ಪರಿಣಾಮ, ಬಸ್ ನಲ್ಲಿದ್ದಂತ ಐವರು ಪ್ರಯಾಣಿಕರು ಗಾಯಗೊಂಡಿರೋ ಘಟನೆ, ಬಡೇಕೊಳ್ಳಿಮಠದ ಬಳಿಯಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ಬಡೇಕೊಳ್ಳಿಮಠ ಕ್ರಾಸ್ ಪಡಿಯಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ, ಭಾರೀ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಇದರಿಂದಾಗಿ ಬಸ್ ನಲ್ಲಿದ್ದಂತ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಉದ್ಯೋಗಾಕಾಂಕ್ಷಿಗಳೇ ಗಮನಿಸಿ :` IBPS’ನಿಂದ 6,342 ಹುದ್ದೆಗಳಿಗೆ ಅರ್ಜಿ ಆಹ್ವಾನ : ಇಲ್ಲಿದೆ ಮಾಹಿತಿ
ಅಂದಹಾಗೇ ಸಾರಿಗೆ ಬಸ್ ಬೆಳಗಾವಿಯಿಂದ ಹಾವೇರಿ ಜಿಲ್ಲೆಯ ಹಿರೇಕೆರೂರಿಗೆ ತೆರಳುತ್ತಿತ್ತು. ಈ ಬಸ್ಸಿನಲ್ಲಿ 35 ಪ್ರಯಾಣಿಕರು ಇದ್ದರು ಎಂದು ತಿಳಿದು ಬಂದಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಸಂಬಂಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.