ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಸುಳ್ಯದ ನಾವೂರು ಬಳಿಯ ನಿವಾಸಿ ಆಬಿದ್ (22) ಹಾಗೂ ಬೆಳ್ಳಾರಿ ಗೌರಿ ಹೊಳೆ ನಿವಾಸಿ ನೌಫಲ್ (28) ಬಂಧಿತ ಆರೋಪಿಗಳು. ಪ್ರಕರಣದ ತನಿಖೆ ನಡೆಯುತ್ತಿದ್ದು, ಎಲ್ಲ ಆರೋಪಿಗಳನ್ನು ಗುರುತಿಸಲಾಗಿದೆ. ಈವರೆಗೆ ನಡೆಸಿದ ತನಿಖೆಯ ಆಧಾರದ ಮೇಲೆ ಒಟ್ಟು 6 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ ತಿಳಿಸಿದ್ದಾರೆ.
ಇನ್ನು ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಬಂಧಿಸಿ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿ ಶಫೀಕ್ ಬೆಳ್ಳಾರೆಗೆ ಮತ್ತೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
BPL ಕಾರ್ಡ್ ಅಗತ್ಯವಿರುವವರಿಗೆ ಗುಡ್ ನ್ಯೂಸ್: ಹೊಸದಾಗಿ ಬಿಪಿಎಲ್ ಪಡಿತರ ಚೀಟಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ