ಬೆಂಗಳೂರು : ರಾಜ್ಯಾದ್ಯಂತ ಮಳೆರಾಯನ ಆರ್ಭಟ ಮುಂದುವರೆದಿದ್ದು, ಮುಂಜಾಗ್ರತೆಯಿಂದ ಹಲವಡೆ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.
Breaking news: ರಾಜಸ್ಥಾನದ ಖಾತು ಶ್ಯಾಮ್ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ ಮೂವರು ಭಕ್ತರು ಬಲಿ, ಇಬ್ಬರಿಗೆ ಗಾಯ
ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಜೈಕುಮಾರ್ ಆದೇಶ ಹೊರಡಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಡಿಡಿಪಿಐ ವೇದಮೂರ್ತಿ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಇಂದಿನಿಂದ ಮಳೆಯ ಅಬ್ಬರ ತುಸು ತಗ್ಗುವ ಲಕ್ಷಣಗಳಿವೆ. ಆದರೆ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಿಗೆ ಬುಧವಾರದವರೆಗೆ ಆರೆಂಜ್ ಅಲರ್ಟ್ ಇರಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದಿನಿಂದ ಬುಧವಾರದವರೆಗೆ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.