ಬೆಂಗಳೂರು: ರಾಜ್ಯದ ಶಾಲಾ ಮಕ್ಕಳಿಗೆ ಪೌಷ್ಠಿಕ ಆಹಾರ ಒದಗಿಸೋ ನಿಟ್ಟಿನಲ್ಲಿ ಇದೀಗ ಶಿಕ್ಷಣ ಇಲಾಖೆಯಿಂದ ಮಧ್ಯಾಹ್ನದ ಬಿಸಿಯೂಟ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರೋದಕ್ಕೆ ಮುಂದಾಗಿದೆ. ಆ ನಿಟ್ಟಿನಲ್ಲಿ ಹೊಸ ಹೆಜ್ಜೆ ಇರಿಸೋ ಪ್ಲಾನ್ ಮಾಡಿದ್ದು, ಶೀಘ್ರವೇ ಬಿಸಿ ಬಿಸಿ ಮುದ್ದೆ, ಜೋಳದ ರೊಟ್ಟಿ ಊಟ ನೀಡೋದಕ್ಕೆ ಮುಂದಾಗಿದೆ. ಈ ಮೂಲಕ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ನೀಡಿದೆ.
ಈ ಬಗ್ಗೆ ಈಗಾಗಲೇ ಶಿಕ್ಷಣ ಇಲಾಖೆಯಿಂದ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎನ್ನಲಾಗುತ್ತಿದೆ. ಅಲ್ಲದೇ ಕೇಂದ್ರ ಸರ್ಕಾರದಿಂದ ಅನುಮತಿಯ ಜೊತೆಗೆ ಅನುದಾನದ ನಿರೀಕ್ಷೆಯಲ್ಲಿಯೂ ಕೂಡ ಶಿಕ್ಷಣ ಇಲಾಖೆ ಇದೆ ಎನ್ನಲಾಗಿದೆ.
BIG NEWS: ಶೀಘ್ರವೇ ಕಾಂಗ್ರೆಸ್ ಪಕ್ಷ ಸೇರ್ಪಡೆ – ಬಿಜೆಪಿ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಪುತ್ರ ಪೂರ್ವಜ್ ಘೋಷಣೆ
ಸದ್ಯ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿಯಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆಯಿಂದ ಅನ್ನ, ಸಾಂಬಾರ್ ನೀಡಲಾಗುತ್ತಿದೆ. ಈ ಮೆನು ಬದಲಾವಣೆ ಮಾಡಿ ಆಯಾ ಪ್ರದೇಶದ ಆಹಾರ ಪದ್ಧತಿಗೆ ಅನುಸಾರವಾಗಿ ಬಿಸಿಯೂಟ ಯೋಜನೆಯಲ್ಲಿ ಬದಲಾವಣೆ ತರೋದಕ್ಕೆ ಮುಂದಾಗಿದೆ.
ಈ ಹಿನ್ನಲೆಯಲ್ಲಿಯೇ ದಕ್ಷಿಣ ಕರ್ನಾಟಕ ಭಾಗದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬಿಸಿ ಬಿಸಿ ರಾಗಿ ಮುದ್ದೆ ನೀಡೋದಕ್ಕೆ ಚಿಂತನೆ ನಡೆಸಿದೆ. ಉತ್ತರ ಕರ್ನಾಟಕ ಭಾಗದ ಸರ್ಕಾರಿ ಶಾಲಾ ಮಕ್ಕಳಿಗೆ ಜೋಳದ ರೊಟ್ಟಿ ನೀಡಲು ಚಿಂತನೆ ನಡೆಸಿದೆ. ಒಂದು ವೇಳೆ ಸರ್ಕಾರಕ್ಕೆ ಶಿಕ್ಷಣ ಇಲಾಖೆ ಸಲ್ಲಿಸಿರುವಂತ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ್ರೇ.. ಶೀಘ್ರವೇ ಬಿಸಿ ಬಿಸಿ ರಾಗಿ ಮುದ್ದೆ, ಜೋಳದ ರೊಟ್ಟಿ ಊಟ ವಿದ್ಯಾರ್ಥಿಗಳಿಗೆ ಸಿಗಲಿದೆ.