ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವಡೆ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
BIGG NEWS : ರಾಜ್ಯದ 160 ಗ್ರಾಮಗಳ ಪ್ರವಾಹ ಸಂತ್ರಸ್ತರಿಗೆ `ಕಾಳಜಿ ಕಿಟ್’ : ಕಂದಾಯ ಸಚಿವ ಆರ್. ಅಶೋಕ್
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಮಲೆನಾಡಿನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Good News : ಹಾಲು ಉತ್ಪಾದಕರಿಗೆ ಭರ್ಜರಿ ಗುಡ್ ನ್ಯೂಸ್ : ಹಾಲಿನ ದರ ರೂ.1 ಹೆಚ್ಚಳ
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಾಗೂ ಚಿಕ್ಕಮಗಳೂರು, ಕೊಡಗು ಸೇರಿ ಐದು ಜಿಲ್ಲೆಗಳಲ್ಲಿ ಇಂದು (ಆಗಸ್ಟ್ 9) ಮತ್ತು ನಾಳೆ (ಆಗಸ್ಟ್ 10) ರಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು,ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ಉತ್ತರ ಕರ್ನಾಟಕದ ವಿಜಯಪುರ, ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.