ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 15 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ನೇಮಕ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ ಅಂತ್ಯದೊಳಗೆ ನೀಡುವ ಗುರಿ ಇದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
BIGG NEWS : `CET ಕೌನ್ಸೆಲಿಂಗ್’ ಕುರಿತಂತೆ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ
ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಅವರು, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 15 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ನೇಮಕ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ ಅಂತ್ಯದೊಳಗೆ ನೀಡುವ ಗುರಿ ಇದೆ. ಅಕ್ಟೋಬರ್ ಅಂತ್ಯದೊಳಗೆ ನೇಮಕ ಪ್ರಕ್ರಿಯೆಯ ಪಟ್ಟಿಯನ್ನು ಬಿಡುಗಡೆ ಮಾಡುವ ಗುರಿ ಇದೆ ಎಂದು ತಿಳಿಸಿದ್ದಾರೆ.
Rain in Karnataka : ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಆರೆಂಜ್-ಯೆಲ್ಲೋ ಅಲರ್ಟ್’ ಘೋಷಣೆ
ಇನ್ಮುಂದೆ ವರ್ಷಕ್ಕೆ ಎರಡು ಬಾರಿ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಲಾಗುತ್ತದೆ. ಆದರೆ ಈ ವರ್ಷ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿರುವುದರಿಂದ ಬರುವ ನವೆಂಬರ್ 6 ರಂದು ಒಂದೇ ಟಿಇಟಿ ನಡೆಸಲಾಗುವುದು ಎಂದರು.
ಅತಿಥಿ ಉಪನ್ಯಾಸಕರ ಗೌರವ ಸಂಭಾವನೆಯನ್ನು 3,000 ರೂ. ಹೆಚ್ಚಳ ಮಾಡಲಾಗಿದೆ. ಅತಿಥಿ ಶಿಕ್ಷಕರ ಗೌರವ ಸಂಭಾವನೆ 2,500 ರೂ. ಹೆಚ್ಚಳ ಮಾಡಲಾಗಿದೆ. ಅಕ್ಷರ ದಾಸೋಹ ಬಿಸಿಯೂಟ ನೌಕರರ ಗೌರವ ಸಂಭಾವನೆಯನ್ನು 1 ಸಾವಿರ ರೂ. ಹೆಚ್ಚಳ ಮಾಡಲಾಗಿದೆ. 2022-23ನೇ ಸಾಲಿನಲ್ಲಿ 32,159 ಅತಿಥಿ ಶಿಕ್ಷಕರ ಸೇವೆಯನ್ನು ಪಡೆಯಲಾಗುತ್ತಿದೆ. 2022-23ನೇ ಸಾಲಿನಲ್ಲಿ ಪಿಯು ಕಾಲೇಜುಗಳಿಗೆ 3,708 ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲಾಗುತ್ತಿದೆ ಎಂದು ಹೇಳಿದ್ದಾರೆ.
BIGG NEWS : ರಾಜ್ಯದ 160 ಗ್ರಾಮಗಳ ಪ್ರವಾಹ ಸಂತ್ರಸ್ತರಿಗೆ `ಕಾಳಜಿ ಕಿಟ್’ : ಕಂದಾಯ ಸಚಿವ ಆರ್. ಅಶೋಕ್