ಹಾಸನ : ರಾಜ್ಯಾದ್ಯಂತ ಮಳೆಯ ಅಬ್ಬರಕ್ಕೆ ಅವಾರಂತರ ಸೃಷ್ಟಿಯಾಗಿದ್ದು, ಹಾಸನ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಮತ್ತೊಂದು ಬಲಿಯಾಗಿದೆ. ವಿದ್ಯುತ್ ತಂತಿ ತುಳಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
Breaking news: ಅಫ್ಘಾನಿಸ್ತಾನದಲ್ಲಿ ತೆಹ್ರೀಕ್-ಎ-ತಾಲಿಬಾನ್ ಉನ್ನತ ಕಮಾಂಡರ್ ʻಒಮರ್ ಖಾಲಿದ್ ಖೋರಾಸಾನಿʼ ಹತ್ಯೆ
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಡಿ.ತುಮಕೂರಲ್ಲಿ ವಿದ್ಯುತ್ ತಂತಿ ತುಳಿದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಭಾರೀ ಮಳೆಯಿಂದಾಗಿ ವಿದ್ಯುತ್ ತಂತಿ ತುಂಡಾಗಿ ಜಮೀನಿನಲ್ಲಿ ಬಿದ್ದಿದೆ. ಈ ವೇಳೆ ಜಮೀನಿಗೆ ಹೋಗಿದ್ದ ಪಾಪಾಚಾರಿ (65) ತುಂಡಾಗಿದ್ದ ವಿದ್ಯುತ್ ತಂತಿ ತುಳಿದು ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.