ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನೀಗಿಸಲು 15 ಸಾವಿರ ಶಿಕ್ಷಕರ ನೇಮಕಾತಿಗೆ ( Teacher Recruitment ) ಕಳೆದ ಮೇನಲ್ಲಿ ನಡೆಸಲಾಗಿದ್ದ ಸಿಇಟಿ ಫಲಿತಾಂಶವನ್ನು, ಆಗಸ್ಟ್ ಅಂತ್ಯದೊಳಗೆ ಪ್ರಕಟಿಸಲಾಗುವುದು. ಆಯ್ಕೆ ಪಟ್ಟಿಯನ್ನು ಅಕ್ಟೋಬರ್ ಅಂತ್ಯದ ವೇಳೆಗೆ ಪ್ರಕಟಿಸಲಾಗುತ್ತದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( Minister BC Nagesh ) ತಿಳಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ನೇಮಕ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ ಅಂತ್ಯದೊಳಗೆ ನೀಡುವ ಗುರಿ ಇದೆ. ಅಕ್ಟೋಬರ್ ಅಂತ್ಯದೊಳಗೆ ನೇಮಕ ಪ್ರಕ್ರಿಯೆಯ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ನವೆಂಬರ್ 6ರಂದು ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸುವುದಾಗಿ ಮಾಹಿತಿ ನೀಡಿದ್ದಾರೆ. ಅಲ್ಲದೇ ಪ್ರತಿ ವರ್ಷ ಎರಡು ಬಾರಿ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಬೇಕಾಗುತ್ತದೆ. ಆದ್ರೇ.. ಈ ವರ್ಷ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿರುವುದರಿಂದ ಬರುವ ನವೆಂಬರ್ 6ರಂದು ಒಂದೇ ಟಿಇಟಿ ನಡೆಸಲಾಗುವುದು ಎಂದು ಹೇಳಿದ್ದಾರೆ.