ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ರಜೌರಿಯಿಂದ 25 ಕಿ.ಮೀ ದೂರದಲ್ಲಿರುವ ಸೇನಾ ಶಿಬಿರದ ಭಯೋತ್ಪಾದಕರು ಆತ್ಮಾಹುತಿ ದಾಳಿ ನಡೆಸಿದ್ದು, ಮೂವರು ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ.
ರಜೌರಿಯಿಂದ 25 ಕಿ.ಮೀ ದೂರದಲ್ಲಿರುವ ಸೇನಾ ನೆಲೆಯೊಂದರ ಮೇಲೆ ಇಬ್ಬರು ಭಯೋತ್ಪಾದಕರು ಆತ್ಮಾಹುತಿ ದಾಳಿ ನಡೆಸಿದ್ದಾರೆ. ಇಬ್ಬರು ಭಯೋತ್ಪಾದಕರನ್ನು ಕೊಲ್ಲಲಾಗಿದ್ದು, ಮೂವರು ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ ಭಾರತೀಯ ಸೇನೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಜಮ್ಮು ಎಡಿಜಿಪಿ ಮುಕೇಶ್ ಸಿಂಗ್, ರಜೌರಿಯ ದರ್ಹಾಲ್ ಪ್ರದೇಶದ ಪರ್ಗಲ್ನಲ್ಲಿರುವ ಸೇನಾ ಶಿಬಿರದ ಬೇಲಿಯನ್ನು ದಾಟಲು ಯಾರೋ ಪ್ರಯತ್ನಿಸಿದ್ದಾರೆ. ಈ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಮತ್ತು ಮೂವರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ತಿಳಿಸಿದ್ದಾರೆ.
In a terrorist attack 25 km from Rajouri, two terrorists carried out a suicide attack on an Army company operating base. Both terrorists have been killed while three own troops have lost their lives. Operations in progress: Indian Army officials pic.twitter.com/57coXZTa6j
— ANI (@ANI) August 11, 2022